Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

Share
1 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.

ಕಣದಲ್ಲಿದ್ದ ಎಂಟು ಅಭ್ಯರ್ಥಿಗಳ ಪೈಕಿ ಏಳು ಮಂದಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಣಕ್ಕಿಳಿಸಿದ್ದ ಐದೂ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಪರವಾಗಿ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳಲ್ಲಿ ಇಬ್ಬರು ಮಾತ್ರ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಅಗತ್ಯ ಮತಗಳು ಲಭಿಸದ ಹಿನ್ನೆಲೆ ಸೋಲು ಎದುರಾಗಿದೆ. ಇದರೊಂದಿಗೆ ಮೈತ್ರಿಕೂಟಕ್ಕೆ ರಾಜಕೀಯವಾಗಿ ಮುಖಭಂಗ ಉಂಟಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರು ಗೆಲುವು ಸಾಧಿಸಿದ್ದಾರೆ. ವಿಶೇಷವಾಗಿ ಐದನೇ ಅಭ್ಯರ್ಥಿಯಾಗಿದ್ದ ವಿನಯ್ ಕಾರ್ತಿಕ್ ಅವರ ಗೆಲುವು ಅಂತಿಮ ಹಂತದವರೆಗೂ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.
ಮೈತ್ರಿಕೂಟದ ಅಭ್ಯರ್ಥಿಗಳಾದ ಲಿಂಗರಾಜ ಪಾಟೀಲ್ ಮತ್ತು ರಘು ಕೌಟಿಲ್ಯ ಜಯಗಳಿಸಿದ್ದು, ಜೆಡಿಎಸ್‌ನ ಗೋವಿಂದರಾಜು ಸೋಲಿನ ಕಹಿ ಅನುಭವಿಸಿದ್ದಾರೆ.
ಈ ಚುನಾವಣೆಯನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದ ಉಪಮುಖ್ಯಮಂತ್ರಿ D. K. Shivakumar ಅವರು ಆರಂಭದಿಂದಲೇ ಕಟ್ಟುನಿಟ್ಟಿನ ತಂತ್ರ ರೂಪಿಸಿದ್ದರು. ಕಾಂಗ್ರೆಸ್ ಶಾಸಕರಲ್ಲಿ ಯಾವುದೇ ಅಡ್ಡಮತದಾನ ನಡೆಯದಂತೆ ಎಲ್ಲರನ್ನು ಬಿಡದಿಯ ರೆಸಾರ್ಟ್‌ನಲ್ಲಿ ಒಟ್ಟಿಗೆ ಇರಿಸಿ ನಿಗಾ ವಹಿಸಲಾಗಿತ್ತು.
ಐದು ಅಭ್ಯರ್ಥಿಗಳ ಗೆಲುವು ಖಚಿತಪಡಿಸಲು ಶಾಸಕರನ್ನು ಐದು ಪ್ರತ್ಯೇಕ ತಂಡಗಳಾಗಿ ವಿಭಜಿಸಿ ಜವಾಬ್ದಾರಿ ಹಂಚಲಾಗಿತ್ತು. ಮತದಾನದ ದಿನವೂ ತಂಡವಾರು ಶಾಸಕರನ್ನು ಪ್ರತ್ಯೇಕ ಬಸ್‌ಗಳಲ್ಲಿ ವಿಧಾನಸೌಧಕ್ಕೆ ಕರೆತಂದು ಮತ ಚಲಾಯಿಸುವಂತೆ ವ್ಯವಸ್ಥೆ ಮಾಡಲಾಗಿತ್ತು.
ವಿರೋಧ ಪಕ್ಷಗಳ ಅಡ್ಡಮತದಾನದ ನಿರೀಕ್ಷೆ ವಿಫಲವಾಗಿದ್ದು, ಕಾಂಗ್ರೆಸ್ ತನ್ನ ಮತಬಲವನ್ನು ಅಚ್ಚುಕಟ್ಟಾಗಿ ಕಾಯ್ದುಕೊಂಡಿದೆ. ಡಿ.ಕೆ. ಶಿವಕುಮಾರ್ ರೂಪಿಸಿದ ತಂತ್ರ ನೂರಕ್ಕೆ ನೂರು ಫಲಿಸಿದೆ.

 

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

TAGGED:alliance suffers a major setbackLegislative Council elections: Congress gets a clean sweep
Share This Article
Facebook Twitter Copy Link Print
Previous Article ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ
Next Article PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?