newsics.com/ನ್ಯೂಸಿಕ್ಸ್
ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ.
ಈಕ್ವಿಟಿ ಮಾರುಕಟ್ಟೆ ಹೆಚ್ಚು ಲಾಭದಾಯಕ ಎಂದೆನಿಸಿದ್ದರಿಂದ ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಕುಸಿದಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ.
ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ?
ಜೂನ್ 19 2026 ಶುಕ್ರವಾರದಂದು , 24 ಕ್ಯಾರೆಟ್ 1 ಗ್ರಾಂ ಬೆಲೆಯಲ್ಲಿ 365 ರೂ ಇಳಿಕೆ ಆಗಿದ್ದು, 14,586 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 3650 ರೂ ಇಳಿಕೆಯಾಗಿದ್ದು 1,45,860 ರೂಪಾಯಿ ದಾಖಲಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ
22 ಕ್ಯಾರೆಟ್ ಚಿನ್ನದ ಬೆಲೆಯೂ ಇಳಿಕೆಯಾಗಿದೆ. 1 ಗ್ರಾಂ ಬೆಲೆ 335 ರೂ ಇಳಿಕೆಯಾಗಿ 13370 ರೂ ಆಗಿದ್ದು 10 ಗ್ರಾಂ ಬೆಲೆ 3350 ರೂ ಇಳಿಕೆಯಾಗಿ, ಈಗ ಬೆಲೆ 1,33,700 ರೂಪಾಯಿ ದಾಖಲಾಗಿದೆ.
ಬೆಳ್ಳಿ ಬೆಲೆ ಇಳಿಕೆ
ಬೆಳ್ಳಿ ಬೆಲೆ ಇಂದು 10 ಸಾವಿರ ಇಳಿಕೆಯಾಗಿದೆ.. ಗ್ರಾಂ ಬೆಲೆ 250 ರೂ ಆಗಿದ್ದು,, 2,50,000 ರೂ ದಾಖಲಾಗಿದೆ.
‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!