Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

Share
3 Min Read
SHARE

newsics.com/ನ್ಯೂಸಿಕ್ಸ್

ಮಹಿಳಾ ಟಿ20 ವಿಶ್ವಕಪ್‌ 2026 ಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಈ ನಡುವೆ ಇದೀಗ ಟೀಮ್ ಇಂಡಿಯಾ ತಂಡದಿಂದ ಸ್ಟಾರ್ ಪ್ಲೇಯರ್, ಕನ್ನಡತಿ ಶ್ರೆಯಾಂಕಾ ಪಟೀಲ್‌ ಅವರು ಇಡೀ ಟೂರ್ನಿಯಿಂದ ಹೊರಬಿದ್ದಿದ್ದು, ಬಿಸಿಸಿಐ ಬದಲಿ ಆಟಗಾರ್ತಿಯನ್ನು ಘೋಷಣೆ ಮಾಡಿದೆ.

ಮ್ಯಾಂಚೆಸ್ಟರ್‌ನಲ್ಲಿ ಜೂನ್ 21ರಿಂದ ನಡೆಯಲಿರುವ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರ ಜಾಗಕ್ಕೆ ಬದಲಿ ಆಟಗಾರ್ತಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

ಶ್ರೇಯಾಂಕಾ ಬದಲಿಗೆ ಹೊಸ ಆಟಗಾರ್ತಿಯ ಘೋಷಣೆ

ಜೂನ್‌ 17ರಂದು ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಪರ ಆಡುವಾಗ ಶ್ರೇಯಾಂಕಾ ಪಾಟೀಲ್ ಅವರ ಕಾಲಿನ ತೀವ್ರವಾಗಿ ಗಾಯವಾಗಿತ್ತು. ತಕ್ಷಣ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಗೆ ಕರೆದೊಯ್ಯಲಾಗಿತ್ತು. ಸದ್ಯ ಅವರು ಈ ಇಡೀ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಈ ಹಿನ್ನೆಲೆ ಅವರ ಬದಲಿಗೆ 24 ವರ್ಷದ ಪ್ರೇಮಾ ರಾವತ್ ಅವರನ್ನು ಟೀಮ್ ಇಂಡಿಯಾಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ರಾಷ್ಟ್ರೀಯ ತಂಡಕ್ಕೆ ಆಯ್ಕ ಆಗಿರುವುದು ಇದೇ ಮೊದಲು

ಪ್ರೇಮಾ ರಾವತ್ ಅವರಿಗೆ ಭಾರತ ರಾಷ್ಟ್ರೀಯ ತಂಡದಿಂದ ಕರೆ ಬಂದಿರುವುದು ಇದೇ ಮೊದಲ ಬಾರಿಯಾಗಿದೆ. ಇವರು ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದಾರೆ. ಅಲ್ಲದೆ, ಜೂನ್ 20ರಿಂದ ಆರಂಭವಾಗಲಿರುವ ಸೀಮಿತ ಓವರ್‌ಗಳ ಸರಣಿಗಾಗಿ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ‘ಭಾರತ ಎ’ ತಂಡದ ಭಾಗವೂ ಆಗಿದ್ದರು.

ಕ್ರಿಕೆಟ್‌ ಅಭಿಮಾನಿಗಳ ಕಣ್ಣು ಪ್ರೇಮಾ ರಾವತ್ ಮೇಲೆ

ಪ್ರೇಮಾ ರಾವತ್ ಅವರ ದಾಖಲೆಗಳನ್ನು ನೋಡುವುದಾದರೆ, ಅವರು ಮಹಿಳಾ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ಆಡಿದ 6 ಪಂದ್ಯಗಳಲ್ಲಿ 3 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡದ ಪರವಾಗಿ ಇವರು ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಸತತ ಮೂರನೇ ಜಯದ ನಿರೀಕ್ಷೆಯಲ್ಲಿ ಭಾರತ

ಭಾರತ ತಂಡದ ಪ್ರಸ್ತುತ ವಿಶ್ವಕಪ್ ಅಭಿಯಾನದ ಬಗ್ಗೆ ಹೇಳುವುದಾದರೆ, ತಂಡವು ತನ್ನ ಮುಂದಿನ ರೋಚಕ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲು ಸಜ್ಜಾಗಿದೆ. ಜೂನ್ 21ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಇವೆರಡೂ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಬೀಗುತ್ತಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧವೂ ಗೆದ್ದು ಸತತ ಮೂರನೇ ಜಯಭೇರಿ ಬಾರಿಸುವ ಉತ್ಸಾಹದಲ್ಲಿದೆ.

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಈ ಬಾರಿಯ ಟಿ20 ವಿಶ್ವಕಪ್ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಆರಂಭಿಸಿತ್ತು. ಇದಾದ ಬೆನ್ನಲ್ಲೇ ತನ್ನ ಮುಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧವೂ ಗೆಲುವು ಸಾಧಿಸಿ ಜಯದ ಓಟವನ್ನು ಮುಂದುವರಿಸಿದೆ.

ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆದರೂ ತನ್ನ ವಿಶ್ವಕಪ್ ಅಭಿಯಾನದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು. ವಿಶ್ವ ಕ್ರಿಕೆಟ್‌ನ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ದಕ್ಷಿಣ ಆಫ್ರಿಕಾವು ಭಾರತ ತಂಡಕ್ಕೆ ತೀವ್ರ ಪೈಪೋಟಿ ನೀಡಲು ಎದುರು ನೋಡುತ್ತಿದೆ. ಒಟ್ಟಿನಲ್ಲಿ ಈ ಪಂದ್ಯದಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವ ಪ್ರೇಮಾ ರಾವತ್ ಅವರು ಯಾವ ರೀತಿಯಾಗಿ ಪ್ರದರ್ಶನ ತೋರಲಿದ್ದಾರೆ ಎನ್ನುವುದೇ ಇದೀಗ ಕುತೂಹಲದ ವಿಚಾರವಾಗಿದೆ.

 

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

TAGGED:Kannada player Shreyanka Patil out of T20 World Cup tournament.. new player in
Share This Article
Facebook Twitter Copy Link Print
Previous Article ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?
Next Article ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

Popular Posts

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

You Might Also Like

ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?