Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

Share
1 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ AI ಫೋಟೋ ಮತ್ತು ವಿಡಿಯೋ ವೈರಲ್ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24)  ಬೆಂಗಳೂರಿನಲ್ಲಿ ವಾಸಿಸುವ ಶಿವಮೊಗ್ಗ ಮೂಲದ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.

ಕಳೆದ ತಿಂಗಳು ನಟಿ ಸಲ್ಲಿಸಿದ ದೂರಿನ ಆಧಾರದ ತನಿಖೆ ಆರಂಭಿಸಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳು AI ತಂತ್ರಜ್ಞಾನವನ್ನು ಬಳಸಿಕೊಂಡು ಅಶ್ಲೀಲ ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳು ರುಕ್ಮಿಣಿ ವಸಂತ್​ ಅವರ ಡೀಪ್​ಫೇಕ್​ ವಿಡಿಯೋವನ್ನು ವೈರಲ್ ಮಾಡಿದ್ದರು. ಆ ವಿಡಿಯೋದಲ್ಲಿ ಅವರು ಬಿಕಿನಿ ಧರಿಸಿ ಸ್ವಿಮ್ಮಿಂಗ್ ಪೂಲ್‌ನಿಂದ ಹೊರಬರುತ್ತಿರುವ ದೃಶ್ಯವನ್ನು ತೋರಿಸಲಾಗಿತ್ತು. ಆದರೆ ಅದು ನಿಜವಾದ ವಿಡಿಯೋ ಅಲ್ಲ ಎಂಬುದು ನಂತರ ಬೆಳಕಿಗೆ ಬಂದಿತ್ತು. ಡೀಪ್‌ಫೇಕ್ ವಿಡಿಯೋ ವೈರಲ್ ಆದ ಬಳಿಕ ನಟಿ ರುಕ್ಮಿಣಿ ವಸಂತ್ ಬೇಸರವನ್ನು ವ್ಯಕ್ತಪಡಿಸಿದ್ದರು. ತಮ್ಮ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಈ ವಿಡಿಯೋ ಸೃಷ್ಟಿಸಲಾಗಿದೆ ಎಂದು ಆರೋಪಿಸಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿ, ತನಿಖೆ ಕೈಗೊಳ್ಳಲಾಯಿತು.

ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೈಬರ್ ಕಮಾಂಡ್‌ನ ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಪರಾಧದಲ್ಲಿ ಬಳಸಲಾದ ಮೂರು ಮೊಬೈಲ್ ಫೋನ್‌ಗಳನ್ನು ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

TAGGED:#news #newsics #rukminivasanth #aibikiniphto #threearrestedentertainment
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

Popular Posts

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

You Might Also Like

ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?