newsics.com / ನ್ಯೂಸಿಕ್ಸ್
ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅಮೆರಿಕ ಮತ್ತು ಇಟಲಿಯ ನಾಯಕರು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಇಟಲಿಯ ‘La7 ಟಿವಿ’ ವಾಹಿನಿಗೆ ನೀಡಿದ ವಿಶೇಷ ಫೋನ್ ಸಂದರ್ಶನದಲ್ಲಿ ಟ್ರಂಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೆಲೋನಿ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಅಕ್ಷರಶಃ ಬೇಡಿಕೊಂಡರು. ಆಕೆಗೆ ನನ್ನೊಂದಿಗೆ ಫೋಟೋ ಬೇಕೇ ಬೇಕಿತ್ತು. ನನಗೇನೂ ಆಕೆಯೊಂದಿಗೆ ಫೋಟೋ ತೆಗೆದುಕೊಳ್ಳಲು ಇಷ್ಟವಿರಲಿಲ್ಲ. ಆದರೆ, ಆಕೆಯನ್ನು ನೋಡಿ ಪಾಪ ಅನಿಸಿದ್ದರಿಂದ ನಾನು ಫೋಟೋ ಕ್ಲಿಕ್ಕಿಸಿಕೊಳ್ಳಲು ಒಪ್ಪಿಕೊಂಡೆ’ ಎಂದಿದ್ದರು.
ಮೆಲೋನಿ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಬೇಡಿಕೊಂಡಿದ್ದರು’ ಎಂದು ಟ್ರಂಪ್ ನೀಡಿರುವ ಹೇಳಿಕೆಯನ್ನು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ತೀವ್ರವಾಗಿ ಖಂಡಿಸಿದ್ದು, ‘ಇದು ಸಂಪೂರ್ಣ ಸುಳ್ಳು, ಇಟಲಿ ಯಾರ ಬಳಿಯೂ ಬೇಡುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ. ಈ ವಿವಾದದ ಹಿನ್ನೆಲೆಯಲ್ಲಿ ಇಟಲಿಯ ಉಪಪ್ರಧಾನಿ ತಮ್ಮ ಅಮೆರಿಕ ಪ್ರವಾಸವನ್ನೇ ರದ್ದುಗೊಳಿಸಿದ್ದಾರೆ.
ಇತ್ತೀಚೆಗೆ ಈ ರೀತಿ ಅಸಂಬದ್ಧವಾಗಿ ಹೇಳಿಕೆ ನೀಡುತ್ತಾ ವಿವಾದಕ್ಕೀಡಾಗುತ್ತಿರುವ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ‘ನಾನು ಮೆಲೋನಿ ಜೊತೆ ಫೋಟೋ ತೆಗೆಸಿಕೊಂಡು, ಮಾತನಾಡಿದ್ದಕ್ಕೇ ಆಕೆ ಧನ್ಯಳಾಗಿರಬೇಕು. ಆಕೆಯೊಂದಿಗೆ ಮಾತನಾಡುವ ಯಾವುದೇ ಅಗತ್ಯ ನನಗಿರಲಿಲ್ಲ’ ಎಂದು ಟ್ರಂಪ್ ಲೇವಡಿ ಮಾಡಿದ್ದರು.
ಈ ಹೇಳಿಕೆ ಜಗತ್ತಿನಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಟ್ರಂಪ್ ಅವರ ಈ ಹೇಳಿಕೆಗೆ ಇಟಲಿ ಪ್ರಧಾನಿ ಮೆಲೋನಿ ಕೂಡ ತಿರುಗೇಟು ನೀಡಿದ್ದಾರೆ. ‘ಇಟಲಿ ಎಂದಿಗೂ ಯಾರ ಬಳಿಯೂ ಬೇಡುವುದಿಲ್ಲ’ ಎಂದು ಟ್ರಂಪ್‌ಗೆ ಮೆಲೋನಿ ಖಡಕ್ ಪ್ರತ್ಯುತ್ತರ ನೀಡಿದ್ದಾರೆ. ಟ್ರಂಪ್ ಅವರ ಈ ಅಹಂಕಾರದ ಹೇಳಿಕೆಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊ ಹಂಚಿಕೊಳ್ಳುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು ಸಂಪೂರ್ಣ ಕಟ್ಟುಕಥೆ. ಅಮೆರಿಕ ಅಧ್ಯಕ್ಷರು ತಮ್ಮದೇ ಮಿತ್ರರಾಷ್ಟ್ರಗಳ ನಾಯಕರೊಂದಿಗೆ ಈ ರೀತಿ ನಡೆದುಕೊಳ್ಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಅವರು ತಮ್ಮ ಮಿತ್ರರನ್ನು ಅವಮಾನಿಸುತ್ತಿರುವುದು ಇದೇ ಮೊದಲೇನಲ್ಲ. ಪಾಶ್ಚಿಮಾತ್ಯ ದೇಶಗಳ ಮತ್ತು ಅಮೆರಿಕದ ನಿಜವಾದ ಶತ್ರುಗಳ ಮುಂದೆ ಮಣಿಯುವ ಟ್ರಂಪ್ ತನ್ನ ಮಿತ್ರರ ಮುಂದೆ ಈ ರೀತಿ ದರ್ಪ ತೋರುತ್ತಿರುವುದು ನಾಚಿಕೆಗೇಡಿನ ಸಂಗತಿ. ಟ್ರಂಪ್ ಒಂದು ವಿಷಯ ನೆನಪಿನಲ್ಲಿಟ್ಟುಕೊಳ್ಳಬೇಕು. ನಾನು ಮತ್ತು ಇಟಲಿ ದೇಶ ಎಂದಿಗೂ ಯಾರ ಬಳಿಯೂ ಬೇಡುವುದಿಲ್ಲ’ ಎಂದು ಮೆಲೋನಿ ಸಿಡಿದೆದ್ದಿದ್ದಾರೆ.
ಇನ್ನು, ಟ್ರಂಪ್ ಅವರ ಈ ಹೇಳಿಕೆಯನ್ನು ‘ಇಡೀ ಇಟಲಿ ದೇಶಕ್ಕೆ ಮಾಡಿದ ಅಪಮಾನ’ ಎಂದು ಟೀಕಿಸಿರುವ ಇಟಲಿಯ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಆಂಟೋನಿಯೊ ತಾಜಾನಿ ಟ್ರಂಪ್ ವರ್ತನೆಗೆ ಪ್ರತಿರೋಧವಾಗಿ ಜೂನ್ 21 ಮತ್ತು 22ರಂದು ನಿಗದಿಯಾಗಿದ್ದ ತಮ್ಮ ಅಧಿಕೃತ ಅಮೆರಿಕ ಪ್ರವಾಸವನ್ನು ತಕ್ಷಣವೇ ರದ್ದುಗೊಳಿಸಿದ್ದಾರೆ.
ಅಂದಹಾಗೆ, ಒಂದಾನೊಂದು ಕಾಲದಲ್ಲಿ ಜಾರ್ಜಿಯಾ ಮೆಲೋನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರಾಗಿದ್ದರು. ಅಷ್ಟೇ ಅಲ್ಲದೆ, 2025ರಲ್ಲಿ ನಡೆದ ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಏಕೈಕ ಯುರೋಪಿಯನ್ ನಾಯಕಿ ಇವರಾಗಿದ್ದರು. ಆದರೆ, ಇತ್ತೀಚೆಗೆ ಪೋಪ್ ಲಿಯೋ ವಿರುದ್ಧ ಟ್ರಂಪ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ಮತ್ತು ಇರಾನ್ ಯುದ್ಧದ ವಿಷಯದಲ್ಲಿ ಉಭಯ ದೇಶಗಳ ನಡುವೆ ಭಿನ್ನಾಭಿಪ್ರಾಯ ಉಂಟಾದ ಕಾರಣ ಇಬ್ಬರ ನಡುವಿನ ಸಂಬಂಧ ಹಳಸಿತ್ತು. ಪ್ರಸ್ತುತ ಜಿ7 ಶೃಂಗಸಭೆಯ ಈ ಇಬ್ಬರು ನಾಯಕರ ನಡುವಿನ ಬಿರುಕು ಮತ್ತಷ್ಟು ದೊಡ್ಡದಾಗಿದೆ.
Io e l’Italia non imploriamo mai. pic.twitter.com/sTpKlqWB67
— Giorgia Meloni (@GiorgiaMeloni) June 19, 2026
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ
ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?