Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಖ್ಯಾತ ನಟ ರಿಷಬ್ ಶೆಟ್ಟಿ ಕರಾವಳಿ ಭಾಗದ ಶಾಸಕರು, ಉದ್ಯಮಿಗಳು ಸಭೆಯಲ್ಲಿ ಭಾಗಿಯಾಗಿ, ತಮ್ಮ ಅಭಿಪ್ರಾಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ಕರಾವಳಿಯಲ್ಲಿ ಕ್ಯಾಬಿನೆಟ್‌ ಸಭೆ ನಡೆಸುತ್ತೇವೆ. ಅಷ್ಟರೊಳಗೆ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧವಿರಬೇಕು. ಸಿಆರ್‌ಝಡ್‌ ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತಕರಾರುಗಳು, ಪರಿಹಾರಗಳ ಬಗ್ಗೆ 15-20 ದಿನಗಳಲ್ಲಿ ವರದಿ ಸಿದ್ಧಪಡಿಸಬೇಕ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕರಾವಳಿಯಲ್ಲಿ ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು. ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಸಿಎಂ ತಾಕೀತು ಮಾಡಿದರು.

ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಲ್ಲಿ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಪರಿಗಣಿಸಲು ಸೂಚನೆ ನೀಡಿದರು.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದೆ. ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಸಭೆಯಲ್ಲಿ ಮಾತನಾಡಿದ ನಟ ರಿಷಬ್‌ ಶೆಟ್ಟಿ ಅವರು, ಕರಾವಳಿಯ ಜಾನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು ಮನವಿ ಮಾಡಿದರು. ಇನ್ನು ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

TAGGED:Rishabh Shetty has been appointed as the Brand Ambassador of Coastal - Malenadu Tourism
Share This Article
Facebook Twitter Copy Link Print
Previous Article ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ
Next Article ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?