ಭಾರತ ‘ಎ’ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಶ್ರೀಲಂಕಾ ‘ಎ’ ವಿರುದ್ಧ ನಡೆದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಕೇವಲ 29 ಎಸೆತಗಳಲ್ಲಿ 94 ರನ್ ಸಿಡಿಸಿ ಭಾರತ ‘ಎ’ ತಂಡಕ್ಕೆ ಪ್ರಶಸ್ತಿ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.