‘ಈಥಾ’ ಟೀಸರ್ ರಿಲೀಸ್: ಲಾವಣಿ ದಂತಕಥೆ ವಿಠಾಬಾಯಿ ಪಾತ್ರದಲ್ಲಿ ಶ್ರದ್ಧಾ ಕಪೂರ್ ಮಿಂಚು!

Newsics.com ಮುಂಬೈ: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಈಥಾ’ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ಪ್ರಸಿದ್ಧ ಲಾವಣಿ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನವನ್ನು ಆಧರಿಸಿದ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್ ಸಂಪೂರ್ಣ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಶ್ರದ್ಧಾ ಕಪೂರ್ ಅವರ ಅದ್ಭುತ ರೂಪಾಂತರ ಗಮನ ಸೆಳೆದಿದ್ದು, ಗರ್ಭಿಣಿಯಾಗಿದ್ದರೂ ವೇದಿಕೆಯಲ್ಲಿ ಕಲಾಪ್ರದರ್ಶನ ನೀಡುವ ವಿಠಾಬಾಯಿ ಅವರ ಹೋರಾಟ ಮತ್ತು ಕಲಾಸೇವೆಯನ್ನು ಭಾವನಾತ್ಮಕವಾಗಿ ಚಿತ್ರಿಸಲಾಗಿದೆ. ಈ ದೃಶ್ಯಗಳು ಸಿನಿಪ್ರೇಮಿಗಳಲ್ಲಿ … Continue reading ‘ಈಥಾ’ ಟೀಸರ್ ರಿಲೀಸ್: ಲಾವಣಿ ದಂತಕಥೆ ವಿಠಾಬಾಯಿ ಪಾತ್ರದಲ್ಲಿ ಶ್ರದ್ಧಾ ಕಪೂರ್ ಮಿಂಚು!