newsics.com/ನ್ಯೂಸಿಕ್ಸ್
ಕಾಫಿಯ ಮಿತವಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಆದರೆ ಕಾಫಿ ಕುಡಿಯಲು ಸಮಯದ ಮಿತಿಯೂ ಇದೆ, ಹೊತ್ತಲ್ಲದ ಹೊತ್ತಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಹಾಗಿದ್ದರೆ ಯಾವ ಸಮಯದಲ್ಲಿ ಕಾಫಿ ಕುಡಿದರೆ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ.
ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು?
ಕಾಫಿ ಕುಡಿಯಲು ಉತ್ತಮ ಸಮಯ ಬೆಳಿಗ್ಗೆ 9:30 ರಿಂದ 11:30 ರ ನಡುವೆ. ಈ ಸಮಯದಲ್ಲಿ ದೇಹದ ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾಗಿರುತ್ತವೆ. ಕಾರ್ಟಿಸೋಲ್ ಅನ್ನು ಒತ್ತಡದ ಹಾರ್ಮೋನ್ ಎಂದು ಕರೆಯಲಾಗುತ್ತದೆ. ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾದಾಗ, ಕಾಫಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ. ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಮೆದುಳನ್ನು ಚುರುಕುಗೊಳಿಸುತ್ತದೆ. ಒತ್ತಡದಲ್ಲಿದ್ದಾಗ ಕಾಫಿ ಕುಡಿದರೆ ಕಾರ್ಟಿಸೋಲ್ ಮಟ್ಟ ಇನ್ನಷ್ಟು ಹೆಚ್ಚಾಗುತ್ತದೆ. ಮಧ್ಯಾಹ್ನ 2 ರಿಂದ 4 ಗಂಟೆಯ ನಡುವೆ ಕಾಫಿ ಕುಡಿಯುವುದು ಒಳ್ಳೆಯದು. ಇದು ಆಲಸ್ಯವನ್ನು ಕಡಿಮೆ ಮಾಡಲು ಹಾಗೂ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ.
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯಬೇಡಿ: ಅನೇಕ ಜನರು ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ದೇಹದಲ್ಲಿ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ನಿಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಆಮ್ಲೀಯತೆ, ಆಮ್ಲತೆ, ಮಲಬದ್ಧತೆ ಮತ್ತು ಇತರ ಹೊಟ್ಟೆ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು.
ಸಂಜೆ ತಡವಾಗಿ ಕಾಫಿ ಕುಡಿಯುವುದು ಒಳ್ಳೆಯದಲ್ಲ: ಸಂಜೆ 4 ಗಂಟೆಯ ನಂತರ ಕಾಫಿ ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಕಾಫಿಯಲ್ಲಿರುವ ಕೆಫೀನ್ ಅಂಶ ದೇಹದಲ್ಲಿ 6 ರಿಂದ 8 ಗಂಟೆಗಳ ಕಾಲ ಇರುವುದರಿಂದ ಇದು ನಿದ್ರೆಗೆ ಅಡ್ಡಿಪಡಿಸಬಹುದು. ಅಲ್ಲದೆ ಸಂಜೆ ತಡವಾಗಿ ಕಾಫಿ ಕುಡಿಯುವುದರಿಂದ ನಿಮ್ಮ ಹಸಿವು ಕಡಿಮೆಯಾಗುತ್ತದೆ.
ಹಿತಮಿತ ಕಾಫಿ ಸೇವನೆಯ ಪ್ರಯೋಜನಗಳೇನು?
ಕಾಫಿಯಲ್ಲಿರುವ ಕೆಫೀನ್ ಮೆದುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ಆಯಾಸ ಕಡಿಮೆ ಮಾಡುತ್ತದೆ. ಕೆಫೀನ್ ಮನಸ್ಥಿತಿಯನ್ನು ಸುಧಾರಿಸುತ್ತದೆ.
ಮಿತವಾದ ಕಾಫಿ ಸೇವನೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಕಾಫಿ ಕುಡಿಯುವುದರಿಂದ ಅಲ್ಝೈಮರ್ ಕಾಯಿಲೆಯನ್ನು ಶೇ 65ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳಿವೆ.
ಕಾಫಿಯಲ್ಲಿ ಪ್ರಬಲ ಆಂಟಿಆಕ್ಸಿಡೆಂಟ್ ಅಂಶಗಳಿದ್ದು, ಇದು ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ ಎಂದು ಹೇಳಲಾಗುತ್ತದೆ.
ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ.
ಮನಸ್ಥಿತಿಯನ್ನು ಸುಧಾರಿಸುತ್ತದೆ.
ಖಿನ್ನತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಿತವಾದ ಕಾಫಿ ಸೇವನೆ ತೂಕ ನಿಯಂತ್ರಣಕ್ಕೆ ಸಹಕಾರಿ.
ಇದು ಟೈಪ್-2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತಂತೆ.
ವಾಟ್ಸ್ಯಾಪ್ ಮುಖ್ಯಸ್ಥರಾಗಿ ಭಾರತದ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ: 8550 ಕೋಟಿ ರೂ. ಹೂಡಿಕೆ