ಕಟ್ಟಡ ಕುಸಿತದ ವೇಳೆ ಹಲವು ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು, ಅವಶೇಷಗಳಡಿ ಸಿಲುಕಿದ್ದಾರೆ. ಇದುವರೆಗೆ 13 ಮಂದಿಯನ್ನು ರಕ್ಷಿಸಲಾಗಿದ್ದು, ಅವರಲ್ಲಿ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್, ಸೇನಾ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ಡ್ರೋನ್‌ಗಳು, ಶ್ವಾನದಳ, ಗ್ಯಾಸ್ ಕಟರ್‌ಗಳು ಹಾಗೂ ಭಾರೀ ಕ್ರೇನ್‌ಗಳ ನೆರವಿನಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳೀಯರು ಕಳಪೆ ಕಾಮಗಾರಿ ಮತ್ತು ಅಕ್ರಮ ನಿರ್ಮಾಣದ ಆರೋಪ ಮಾಡಿದ್ದು, ಕಟ್ಟಡ ವಿನ್ಯಾಸ ಮತ್ತು ನಿರ್ಮಾಣ ಗುಣಮಟ್ಟದ ಬಗ್ಗೆ ತನಿಖೆ ಆರಂಭಿಸಲಾಗಿದೆ.
https://www.youtube.com/watch?v=L433sYmlBWE