Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Love that melted in fire ಪ್ರೀತಿ ಚಿಗುರೊಡೆದ ಕಟ್ಟಡದಲ್ಲೇ ಸುಟ್ಟು ಬೂದಿಯಾಯ್ತು… ಕಮರಿಹೋಯ್ತು ನೀಲೇಶ್- ಅನಾಮಿಕಾ ಬದುಕು
ಪ್ರಮುಖದೇಶ

Love that melted in fire ಪ್ರೀತಿ ಚಿಗುರೊಡೆದ ಕಟ್ಟಡದಲ್ಲೇ ಸುಟ್ಟು ಬೂದಿಯಾಯ್ತು… ಕಮರಿಹೋಯ್ತು ನೀಲೇಶ್- ಅನಾಮಿಕಾ ಬದುಕು

Share
2 Min Read
SHARE

newsics.com | ನ್ಯೂಸಿಕ್ಸ್

ಲಕ್ನೋ: ಬದುಕಿನಲ್ಲಿ ಹೊಸ ಭರವಸೆ, ಉದ್ಯೋಗದಲ್ಲಿ ಬಡ್ತಿ, ಕೈತುಂಬಾ ಸಂಬಳ, ಜತೆಗೆ ಕೈಹಿಡಿಯಲಿರುವ ಪ್ರೇಯಸಿಯೊಂದಿಗೆ ಸಾಗಲಿರುವ ಸುಂದರ ಸಂಸಾರದ ಕನಸು. 27 ವರ್ಷದ ನೀಲೇಶ್ ಕುಮಾರ್ ಜೀವನದಲ್ಲಿ ಎಲ್ಲವೂ ಅಂದುಕೊಂಡಂತೆ ಸಾಗುತ್ತಿತ್ತು. ಆದರೆ, ಲಕ್ನೋದ ಅಲಿಗಂಜ್‌ನಲ್ಲಿ ಸೋಮವಾರ ಸಂಭವಿಸಿದ ಆ ಒಂದು ಭೀಕರ ಅಗ್ನಿ ದುರಂತ ಆತನ ಇಡೀ ಪ್ರಪಂಚವನ್ನೇ ಸುಟ್ಟು ಬೂದಿ ಮಾಡಿದೆ.

ಯಾವ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರೂ ಭೇಟಿಯಾಗಿ ಪ್ರೀತಿಯಲ್ಲಿ ಬಿದ್ದಿದ್ದರೋ, ಅದೇ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನೀಲೇಶ್ ಹಾಗೂ ಆತನ ಭಾವಿ ಪತ್ನಿ, 30 ವರ್ಷದ ಅನಾಮಿಕಾ ಸಮಂತ ಇಬ್ಬರೂ ಸಜೀವ ದಹನವಾಗಿದ್ದಾರೆ.

ಕೆಲಸದ ಸ್ಥಳದಲ್ಲೇ ಚಿಗುರಿದ್ದ ಪ್ರೀತಿ
ಮೂಲತಃ ಲಕ್ನೋದವರಾದ ನೀಲೇಶ್ ಅತ್ಯಂತ ಕಠಿಣ ಪರಿಶ್ರಮಿ, ಪಶ್ಚಿಮ ಬಂಗಾಳದ ಅನಾಮಿಕಾ ಸಮಂತ ಅವರು ಅದೇ ಅಲಿಗಂಜ್ ಕಟ್ಟಡದ ಅನಿಮೇಷನ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಜತೆಯಾಗಿ ಕೆಲಸ ಮಾಡುವಾಗ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಈ ವರ್ಷವಷ್ಟೇ ನೀಲೇಶ್‌ಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಜೊತೆಗೆ ಸಂಬಳವೂ ಹೆಚ್ಚಾಗಿತ್ತು. ಮದುವೆಗೂ ಮುನ್ನ ಹಣ ಉಳಿಸಿ, ಕುಟುಂಬಕ್ಕೆ ಒಂದು ಹೊಸ ಮನೆ ಕಟ್ಟಿಸಿಕೊಡಬೇಕೆಂಬುದು ಆತನ ದೊಡ್ಡ ಕನಸಾಗಿತ್ತು. ಆ ಮನೆ ಮುಂದಿನ ವರ್ಷ ಪೂರ್ಣಗೊಂಡ ತಕ್ಷಣ ಮದುವೆಯಾಗಲು ನಿರ್ಧರಿಸಿದ್ದರು.

ಕಳೆದ ವಾರವಷ್ಟೇ ನಡೆದಿತ್ತು ನಿಶ್ಚಿತಾರ್ಥ
ಕಳೆದ ವಾರವಷ್ಟೇ ಅನಾಮಿಕಾಳ ಪೋಷಕರು ಪಶ್ಚಿಮ ಬಂಗಾಳದಿಂದ ಲಕ್ನೋಗೆ ವಿಮಾನದ ಮೂಲಕ ಬಂದಿದ್ದರು. ನೀಲೇಶ್ ಮನೆಯಲ್ಲಿ ಇಬ್ಬರ ಪ್ರೀತಿಗೂ ಒಪ್ಪಿಗೆ ಸಿಗುವ ಮೂಲಕ ಅತ್ಯಂತ ಹರ್ಷಚಿತ್ತದಿಂದ ನಿಶ್ಚಿತಾರ್ಥ ಶಾಸ್ತ್ರ ಮುಗಿದಿತ್ತು. ಮದುವೆಯ ಮುಂದಿನ ಮಾತುಕತೆಗಾಗಿ ನೀಲೇಶ್ ಕುಟುಂಬದವರು ಮುಂದಿನ ವಾರ ಪಶ್ಚಿಮ ಬಂಗಾಳಕ್ಕೆ ಹೋಗಲು ರೈಲು ಟಿಕೆಟ್‌ಗಳನ್ನೂ ಬುಕ್ ಮಾಡಿದ್ದರು.

ಆಸ್ಪತ್ರೆಯ ಹೊರಗೆ ಕುಟುಂಬದವರ ಆಕ್ರಂದನ
ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದ ಆಸ್ಪತ್ರೆಯ ಹೊರಗೆ ನಿಂತು ಕಣ್ಣೀರು ಹಾಕುತ್ತಿದ್ದ ನೀಲೇಶ್ ಸಹೋದರ ಅಭಿಷೇಕ್, ನಾವೆಲ್ಲರೂ ಮದುವೆಯ ಸಿದ್ಧತೆಯಲ್ಲಿದ್ದೆವು. ಕೆಲವು ದಿನಗಳ ಹಿಂದೆ ನಮ್ಮ ಮನೆಯಲ್ಲೇ ಚಿಕ್ಕದೊಂದು ಸಮಾರಂಭ ನಡೆದಿತ್ತು. ಅನಾಮಿಕಾ ತುಂಬಾ ನಗುನಗುತ್ತಾ ಎಲ್ಲರೊಂದಿಗೂ ಬೆರೆತಿದ್ದಳು. ಆದರೆ ಒಂದು ಬೆಂಕಿ ಈಗ ಎಲ್ಲವನ್ನೂ ಕಿತ್ತುಕೊಂಡಿದೆ ಎಂದು ಶೋಕ ವ್ಯಕ್ತಪಡಿಸಿದರು.

ಸೋಮವಾರ ಸಂಭವಿಸಿದ ಈ ಭೀಕರ ದುರಂತದಲ್ಲಿ ನೀಲೇಶ್ ಮತ್ತು ಅನಾಮಿಕಾ ಸೇರಿದಂತೆ ಒಟ್ಟು 15 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಹೆಚ್ಚಿನವರು ತಮ್ಮ ಕಣ್ಣುಗಳಲ್ಲಿ ನೂರಾರು ಕನಸುಗಳನ್ನು ಹೊತ್ತು ಕಲಿಯಲು ಬಂದಿದ್ದ ಅಮಾಯಕ ವಿದ್ಯಾರ್ಥಿಗಳಾಗಿದ್ದರು.

Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

Health care ಅತಿಯಾದ ಮೊಬೈಲ್ ಬಳಕೆಯಿಂದ ಸಾವು ಸಾಧ್ಯತೆ, ತಜ್ಞರು ಹೇಳಿದ್ದೇನು?

New Trend ಸ್ಮಶಾನದಲ್ಲಿ ಡೇಟಿಂಗ್! ಯುವಜನರ ಹೊಸ ಟ್ರೆಂಡ್

 

TAGGED:The building where love blossomed burned to ashes... Nilesh-Anamika's life was ruined
Share This Article
Facebook Twitter Copy Link Print
Previous Article Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು
Next Article Metro broke down… ಕೈಕೊಟ್ಟ ಮೆಟ್ರೋ ಎಫೆಕ್ಟ್: ನಮ್ಮೂರಲ್ಲಿ ಹಂಗೇನಿಲ್ಲ… ಬಸ್ಸು, ಲಾರಿ ಏನೇ ಬರ್ಲಿ ಹತ್ಕೊಂಡ್ ಹೋಯ್ತಾರೋ… ವಿಡಿಯೋ ನೋಡಿ

Popular Posts

Metro broke down… ಕೈಕೊಟ್ಟ ಮೆಟ್ರೋ ಎಫೆಕ್ಟ್: ನಮ್ಮೂರಲ್ಲಿ ಹಂಗೇನಿಲ್ಲ… ಬಸ್ಸು, ಲಾರಿ ಏನೇ ಬರ್ಲಿ ಹತ್ಕೊಂಡ್ ಹೋಯ್ತಾರೋ… ವಿಡಿಯೋ ನೋಡಿ

2 Min Read

Love that melted in fire ಪ್ರೀತಿ ಚಿಗುರೊಡೆದ ಕಟ್ಟಡದಲ್ಲೇ ಸುಟ್ಟು ಬೂದಿಯಾಯ್ತು… ಕಮರಿಹೋಯ್ತು ನೀಲೇಶ್- ಅನಾಮಿಕಾ ಬದುಕು

2 Min Read

Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

3 Min Read

ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

1 Min Read

You Might Also Like

ಕರ್ನಾಟಕಪ್ರಮುಖ

MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

1 Min Read
ದೇಶಪ್ರಮುಖ

Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

3 Min Read
ಕರ್ನಾಟಕದೇಶಪ್ರಮುಖ

UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ

2 Min Read
ಪ್ರಮುಖಕರ್ನಾಟಕದೇಶಲೈಫ್‌ಸ್ಟೈಲ್

Health care ಅತಿಯಾದ ಮೊಬೈಲ್ ಬಳಕೆಯಿಂದ ಸಾವು ಸಾಧ್ಯತೆ, ತಜ್ಞರು ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?