Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-06-2026, ಗುರುವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-06-2026, ಗುರುವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?

Share
4 Min Read
SHARE

newsics.com | ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ | ರಾಶಿ ಭವಿಷ್ಯ

25-06-2026, ಗುರುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಶುಕ್ಲಪಕ್ಷದ ಏಕಾದಶಿ.

* ನಿರ್ಜಲ ಏಕಾದಶಿ

—

ರಾಹು ಕಾಲ 13:58 – 15:35

ಯಮಗಂಡ ಕಾಲ 05:57 – 07:33

ಗುಳಿಕ ಕಾಲ 09:10 – 10:46

—-

ಇಂದಿನ ಪಂಚಾಂಗ

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಶಿವ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:58 – 15:35, ಯಮಗಂಡ ಕಾಲ 05:57 – 07:33, ಗುಳಿಕ ಕಾಲ 09:10 – 10:46

——–

ಇಂದಿನ ರಾಶಿ ಭವಿಷ್ಯ

ಮೇಷ

ನಿಮ್ಮ ಆಪ್ತ ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ. ಸಂಗಾತಿಯ ಮಾತನ್ನು ಉಳಿಸಿಕೊಳ್ಳುವಿರಿ. ಕೆಲಸ ಹಾಗೂ ವೈಯಕ್ತಿಕ ಜೀವನದಲ್ಲಿ ಸಮತೋಲನವನ್ನು ಕಾಪಾಡುವುದು ಉತ್ತಮ. ವೈಯಕ್ತಿಕ ಜೀವನವನ್ನು ಕೆಲವರು ಅನುಸರಿಸಲು ಇಷ್ಟಪಡಬಹುದು. ಫಲವೂ ಉತ್ತಮವಾದುದೇ ಸಿಗುವುದು. ನಂತರದ ಜೀವನದಲ್ಲಿ ಹೆಚ್ಚಿನ ನೀರಿಕ್ಷೆಯನ್ನು ಮಾಡಿ ಕೊರಗಬೇಡಿ.

ವೃಷಭ 

ಎಲ್ಲ ಹಾದಿಗಳೂ ನಿಮ್ಮದೇ ಆಗಿದ್ದರೂ ಒಂದು ಹಾದಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು ಮನೆಯ ಸುಧಾರಣೆಯ ಬಗ್ಗೆ ಯೋಚಿಸಿ. ವೈವಾಹಿಕ ಜೀವನದಲ್ಲಿ ಅಸಾಧಾರಣ ಕ್ಷಣಗಳಾಗಲಿದ್ದು, ಪ್ರೀತಿಪಾತ್ರರಿಗೆ ಅಗತ್ಯವಾದ ಸಮಯವನ್ನು ನೀಡಿ. ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ.

ಮಿಥುನ 

ನಿಮ್ಮ ಎಂದಿನ‌ ನಿಚ್ಚಲ ಮನಸ್ಸಿನಿಂದ ವಿಚಲಿತರಾಗಬೇಡಿ. ನಿಮಗೆ ಯಾರಿಂದಲಾದರೂ ಕೆಲಸವಾಗಬೇಕಿದ್ದರೆ ಪ್ರೀತಿಯಿಂದ ಹೇಳಿ, ಅನಾಯಾಸವಾಗಿ ಆಗುವುದು. ಸ್ನೇಹಿತರ ಭೇಟಿ ಉತ್ಸಾಹಭರಿತವಾಗಿದ್ದು, ಯುವಕರು ಶೈಕ್ಷಣಿಕ ಸಲಹೆ ಪಡೆಯಬಹುದು. ಸಮಾಜದ ಬಗ್ಗೆ ಚಿಂತಕರಾಗಿದ್ದರೆ ಅತಿಥಿಯಾಗಿ ನೀವು ಇರುವಿರಿ. ಒತ್ತಾಯಕ್ಕೆ ನೀವು ಕಾರ್ಯವನ್ನು ಮಾಡಬೇಕಾಗುವುದು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ 

ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ‌ಹರೊಯವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಸಂಬಂಧಗಳಿಗಿಂತ ಹೆಚ್ಚಿನ ಪ್ರಾಶಸ್ತ್ರ ನೀಡಬಾರದು. ಪ್ರೀತಿಪಾತ್ರರಿಂದ ವಿಶೇಷ ಆಶ್ಚರ್ಯ ಸಿಗಬಹುದು. ಇದರಿಂದ ನಿಮ್ಮ ದಿನ ಹತ್ತಿರದವರ ಸಮ್ಮುಖದಲ್ಲಿ ಸಂತೋಷವಿರಲಿದೆ. ಯಾರದೋ ಕಾರ್ಯವನ್ನು ನಿಮ್ಮದೆಂದು ಬಿಂಬಿಸುವುದು ಬೇಡ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.

ಸಿಂಹ 

ಇನ್ನೊಬ್ಬರನ್ನು ಗೌರವಿಸುವ ಅಭ್ಯಾಸದಿಂದ ನಿಮಗೆ ಶ್ರೇಷ್ಠವಾದ ಮಾರ್ಗವು ತೆರೆದುಕೊಳ್ಳಬಹುದು. ಸಂಶಯಾಸ್ಪದ ವ್ಯಕ್ತಿಗಳಿಂದ ದೂರವಿರಿ. ಪ್ರಾಣಿಗಳ ಜೊತೆ ಒಡನಾಟ ಜಾಸ್ತಿಯಾಗಿರುವುದು. ಪ್ರೀತಿಯನ್ನು ಹೊಸ ರೀತಿಯಲ್ಲಿ ಅನುಭವಿಸಲು ಆಪ್ತರ ಭೇಟಿಯ ಅವಕಾಶ ದೊರೆಯುತ್ತದೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು.

ಕನ್ಯಾ 

ಮನೆಯಲ್ಲಿ ಸಣ್ಣ ಸಣ್ಣ ಖರ್ಚುಗಳಿಗೆ ಧನವನ್ನು ಖರ್ಚು ಮಾಡಬೇಕಾಗಬಹುದು. ಆರ್ಥಿಕ ಸ್ಥಿತಿ ಸುಧಾರಿಸಿದರೂ ಖರ್ಚುಗಳ ಮೇಲೆ ನಿಯಂತ್ರಣ ಅಗತ್ಯ. ಪ್ರೇಮಜೀವನದಲ್ಲಿ ಹೊಸ ಉತ್ಸಾಹ ದೊರೆಯುತ್ತಿದ್ದು, ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಅನುಭವಿಸುವ ಅವಕಾಶ ಸಿಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಸಾಹಿತ್ಯಕ್ಷೇತ್ರದವರು ಸಾಧಿಸಲು ಮಾರ್ಗಗಳು ಗೊತ್ತಾಗಲಿವೆ.

ತುಲಾ 

ಇಂದು ನಿಮ್ಮ ಮನಸ್ಸು ಶಕ್ತಿಯನ್ನು ಕಳೆದುಕೊಳ್ಳಬಹುದು. ಪರಿಹಾರದ ದಾರಿಗಳು ಆ ಕ್ಷಣದಲ್ಲಿ ಸ್ಫುರಿಸುವುದು. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ಅದರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ, ಸಂತೋಷದ ಕ್ಷಣಗಳು ನಿಮ್ಮ ದಿನವನ್ನು ಅಲಂಕರಿಸಬಹುದು. ದೂರದ ಊರಿಗೆ ಹೋಗಬೇಕಾಗುವುದು. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ.

ವೃಶ್ಚಿಕ 

ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು. ಆಸ್ತಿಯ ವಿಚಾರದಲ್ಲಿ ಕಾನೂನಿನ ತೊಂದರೆಗಳು ಇದ್ದು ಅದನ್ನು ಸರಿಪಡಿಸಿಕೊಳ್ಳಲು ಓಡಾಟಗಳಾಗಬಹುದು. ಬೇಸರದಿಂದ ಏಕಾಂತವಾಗಬೇಕಾಗುವುದು. ಆರ್ಥಿಕವಾಗಿ ಸುಧಾರಣೆ ಕಾಣುವ ದಿನವಾಗಿದ್ದು, ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶವಿದೆ. ಉನ್ನತ ವ್ಯಾಸಂಗಕ್ಕೆ ತೆರಳುವ ಮನಸ್ಸು ಮಾಡುವಿರಿ. ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ. ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಂತೋಷಗೊಳಿಸುವಿರಿ.

ಧನುಸ್ಸು

ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಕೆಲಸದ ಹಣವನ್ನು ಪಡೆಯಲು ಬಾಕಿ ಇರುವುದು. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ಕೆಲಸವಿಲ್ಲದೇ ಮನೆಯಲ್ಲಿ ಕುಳಿತಿರುವುದು ಹಿಂಸೆಯಾದೀತು. ಆತುರಾತುರದಿಂದ ನೀವು ಮಾಡುವ ನಿರ್ಧಾರಗಳು ಮುಜುಗರ ಉಂಟುಮಾಡಲಿದೆ. ನಿಮಗೆ ಪ್ರಶಂಸೆಯು ಬಲವನ್ನು ಕೊಡುವುದು.

ಮಕರ 

ಸಹೋದರ ಒಡನಾಟದಿಂದ ದೂರಾಗಲಿದೆ. ಸಂಗಾತಿಯ ಮಾತುಗಳನ್ನು ಕೇಳಿ ನೀವು ತಾಳ್ಮೆಯಿಂದ ಇದ್ದರೆ ನಿಜವಾಗಿಯೂ ದೊಡ್ಡವರೇ. ಮಾತನಾಡುವಾಗ ಪದಗಳನ್ನು ಸರಿಯಾಗಿ ಬಳಸುವುದು ಉತ್ತಮ. ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಕೊಡಿ. ಬರಬೇಕಾದ ಹಣವು ಮಧ್ಯವರ್ತಿಗಳ ಕೈಯ್ಯಲ್ಲಿರುತ್ತದೆ. ಕೆಲವನ್ನು ಕೇಳಿ ಪಡೆಯಬೇಕಾಗುವುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ.

ಕುಂಭ 

ತಂದೆಯ ಸಲಹೆಯಿಂದ ಹಣದ ಲಾಭವನ್ನು ಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ. ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ಹತ್ತಿರದ ವ್ಯಕ್ತಿಗಳು ಕಾರಣಾಂತರಗಳಿಂದ ದೂರಾಗಬಹುದು. ಸಮಯ ಸಂದರ್ಭಗಳನ್ನು ನೋಡಿಕೊಂಡು ಮಾತನಾಡಿ. ಅಪಹಾಸ್ಯಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆಬಿದೆ. ನಿಮಗೆ ಸಿಗುವ ಸೂಚನೆಗಳನ್ನು ಗಮನಿಸಿಕೊಂಡು ವ್ಯವಹಾರಾದಿಗಳನ್ನು ಮಾಡಿ.

ಮೀನ 

ಇಂದು ನಿಮ್ಮ ಮನಸ್ಸಿಗೆ ಧಾರ್ಮಿಕತೆಯು ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ದ್ವೇಷವನ್ನು ದೂರ ಮಾಡಿಕೊಳ್ಳಲಾಗದು. ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ. ಪೋಷಕರ ಸಲಹೆಗಳು ನಿಮ್ಮ ನಿರ್ಧಾರವನ್ನು ಬದಲಿಸುತ್ತಸದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಪ್ರಯಾಣ ಮಾಡಲಿರುವಿರಿ. ವಸ್ತುಗಳು ಕಾಣೆಯಾಗಬಹುದು.

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

TAGGED:#almanac #zodiac #prediction #25-06-2026 #thursday #horoscope #planetary #positions #news #newsics
Share This Article
Facebook Twitter Copy Link Print
Previous Article Air India flight ಏರ್ ಇಂಡಿಯಾ ವಿಮಾನ ಪಾಕ್ ವಾಯುಪ್ರದೇಶ ಪ್ರವೇಶಿಸಿದ್ದೇಕೆ? ತೀವ್ರಗೊಂಡ DGCA ತನಿಖೆ
Next Article ಇಂದು ಟಿಬಿ ಡ್ಯಾಂನ 33 ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ, 3 ಸಿಎಂಗಳ ಸಮಾಗಮ

Popular Posts

In-charge Ministers ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

1 Min Read

Krushi- Vaishak ತಾಪಂಡ ಮನೆಯಲ್ಲೇ ವೈಶಾಕ್ ಆತ್ಮ*ಹ*ತ್ಯೆ ಮಾಡಿಕೊಂಡಿದ್ದೇಕೆ? ಸಾಯುವ ಮುನ್ನ ಗೆಳತಿಗೆ ಹೇಳಿದ್ದೇನು? ಕೃಷಿಗೀಗ ತನಿಖೆ ಭಯ!

3 Min Read

ವಾರಾಣಸಿ ವಿಶ್ವದ ಎರಡನೇ ಸಸ್ಯಾಹಾರಿ ನಗರವಾಗುತ್ತಿದೆಯೇ?

1 Min Read

ಜೈಪುರದ ರಾಜಮನೆತನದ ಮದುವೆಗೆ ಅನಿರೀಕ್ಷಿತ ಅತಿಥಿಯಾದ ಕೊರಿಯನ್ ಪ್ರವಾಸಿಗ; ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕದೇಶಪ್ರಮುಖ

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read
ಪ್ರಮುಖಕರ್ನಾಟಕದೇಶ

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read
ಪ್ರಮುಖಕರ್ನಾಟಕದೇಶ

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read
ಕರ್ನಾಟಕಪ್ರಮುಖಮನರಂಜನೆ

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?