newsics.com | ನ್ಯೂಸಿಕ್ಸ್
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಫಾರ್ಮ್ ಹೌಸ್ ಮುಂಭಾಗದ ಗೇಟ್ ಬಳಿ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು ಎನ್ನಲಾಗುತ್ತಿದೆ. ಸುಣ್ಣ ಘಟ್ಟ ಗ್ರಾಮದಲ್ಲಿರೋ ಫಾರ್ಮ್ ಹೌಸ್ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಸುಣ್ಣಘಟ್ಟ ಗ್ರಾಮದ ಜಮೀನಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ವಕೀಲ ಎನ್ಸಿ ಮೋಹನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಣ್ಣಘಟ್ಟ ಗ್ರಾಮದ ಜಮೀನಿನಲ್ಲಿ ಮೋಹನ್ ಫಾರ್ಮ್ಹೌಸ್ ಕಟ್ಟಿಕೊಂಡಿದ್ರು,
ಇಂದು ಬೆಳಗ್ಗೆ ಕೂಡ ತೋಟಕ್ಕೆ ಬಂದಿದ್ದು, ಮನೆಯ ಮುಂಭಾಗದ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ. ಗಾಯಾಳು ಮೋಹನ್ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ
Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ