newsics.com | ನ್ಯೂಸಿಕ್ಸ್
ತುಮಕೂರು:ಸಿನಿಮಾ ಕಥೆಯನ್ನೂ ಮೀರಿಸುವಂತಹ ಕ್ರೈಂ ಥಿಲ್ಲರ್ ಸ್ಟೋರಿ ತುಮಕೂರಿನಲ್ಲಿ ನಡೆದಿದೆ.
ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ ಇರಿದು ಬಳಿಕ ಕಾರಿನ ಸಮೇತ ಸ್ಫೋಟಿಸಿಕೊಂಡಿರುವ ಘಟನೆ ಕಳ್ಳಂಬೆಳ್ಳ ಬಳಿ ನಡೆದಿದೆ.
ರಸ್ತೆಯಲ್ಲಿ ಕಾರು ಬ್ಲಾಸ್ಟ್ ಆಗಿ ಕಾರ್ನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಕಾರಿನಲ್ಲಿ ಸ್ಫೋಟಕ ವಸ್ತು ಇತ್ತು ಎನ್ನಲಾಗಿದ್ದು, ನಾಗೇಂದ್ರ (30) ಎಂಬುವರು ಸಜೀವ ದಹನವಾಗಿದ್ದಾರೆ.
ಕಾರಿನಲ್ಲಿದ್ದ ಯುವತಿಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, ಕಾರು ಬೆಂಗಳೂರಿನಿಂದ ಅಂಕೋಲಾಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಕಾರಿನಲ್ಲಿದ್ದ ಯುವತಿಯನ್ನು ಬೆಂಗಳೂರಿನ ಜಯನಗರ ನಿವಾಸಿ ರಮ್ಯಾ ಎಂದು ಗುರುತಿಸಲಾಗಿದ್ದು, ರಮ್ಯಾಳನ್ನ ಕಿಡ್ನಾಪ್ ಮಾಡಿಕೊಂಡು ಬರುತ್ತಿದ್ದ ಎನ್ನಲಾಗಿದೆ.
ನಾಡಬಾಂಬ್ ಬಳಸಿ ಕಾರು ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಯುವತಿಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದರಿ 48ರಲ್ಲಿ ಇಂದು ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ನಡೆದಿದೆ. ನಾಗೇಂದ್ರ ಕಾರಿನಲ್ಲೇ ಸುಟ್ಟು ಕರಕಲಾಗಿದ್ದಾನೆ.
ಸದ್ಯ ಬ್ಲಾಸ್ಟ್ ಹೇಗಾಗಿದೆ ಎಂಬುದರ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
https://www.newsics.com/2026/06/27/fir-case