newsics.com| ನ್ಯೂಸಿಕ್ಸ್
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ(ಜೂ.27) ಮುಂಜಾನೆ ಲಾರಿ ಹಾಗೂ ಓಮಿನಿ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟವರು. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಓಮಿನಿ ವಾಹನದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಹಾವೇರಿಯಲ್ಲಿ ಒಂದೇ ಊರಿನ ಗ್ರಾಮಸ್ಥರಾಗಿದ್ದ ಇವೆರೆಲ್ಲಾ ಓಮಿನಿ ವಾಹನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು. ಕೊಪ್ಪಳದ ಭಾನಾಪೂರ ಹತ್ತಿರ ತಲುಪಿದಾಗ, ಪಕ್ಕದ ರಸ್ತೆಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಮಧ್ಯದ ಡಿವೈಡರ್ ದಾಟಿ ಎದುರಿನಿಂದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.
Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ ಕರ್ನಾಟಕ
Richest CEO Shankh ಈ ವ್ಯಕ್ತಿಯ ದಿನದ ಸಂಬಳ 21 ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?