newsics.com| ನ್ಯೂಸಿಕ್ಸ್
ವಿಕ್ಟೋರಿಯಾ: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ನಾಯಕತ್ವಕ್ಕಾಗಿ ಸೆಶೆಲ್ಸ್ ದೇಶದ ಅತ್ಯುನ್ನತ ವಿಶಿಷ್ಟ ಗೌರವವಾದ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ (Guardian of the Blue Horizon) ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಜೂನ್ 28) ಪ್ರದಾನ ಮಾಡಲಾಯಿತು.
ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನೀ ಅವರು ಪ್ರಧಾನಿ ಮೋದಿಗೆ ಲ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವಿದೇಶಿ ರಾಷ್ಟ್ರವೊಂದರಿಂದ ಪ್ರಧಾನಿ ಮೋದಿಯವರು ಸ್ವೀಕರಿಸುತ್ತಿರುವ 34ನೇ ಅಂತಾರಾಷ್ಟ್ರೀಯ ಗೌರವ ಇದಾಗಿದೆ.
ಸೆಶೆಲ್ಸ್ ಗಣರಾಜ್ಯದ ಇತಿಹಾಸದಲ್ಲಿಯೇ ಅಂತಾರಾಷ್ಟ್ರೀಯ ಗಣ್ಯರೊಬ್ಬರಿಗೆ ಈ ವಿಶಿಷ್ಟ ಪ್ರಶಸ್ತಿಯನ್ನು ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಈ ಮುಂಚೆ ಈ ಪ್ರಶಸ್ತಿಯನ್ನು ಯಾರಿಗೂ ನೀಡಿರಲಿಲ್ಲ. ಇದು ಭಾರತ ಮತ್ತು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಜಾಗತಿಕ ಮಟ್ಟದಲ್ಲಿ ಸಿಕ್ಕ ಭಾರಿ ಮನ್ನಣೆಯಾಗಿದೆ.
ಸೆಶೆಲ್ಸ್ ಕರಾವಳಿ ಕಾವಲು ಪಡೆಯ ನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಭಾರತದಲ್ಲೇ ತಯಾರಿಸಲಾದ ವೇಗದ ಗಸ್ತು ನೌಕೆಯನ್ನು ಆ ದೇಶದ ಕರಾವಳಿ ಕಾವಲು ಪಡೆಗೆ ಹಸ್ತಾಂತರಿಸಿದರು. ಇದು ಸೆಶೆಲ್ಸ್‌ನ ಕಡಲ ಭದ್ರತಾ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದೆ.
ಸೆಶೆಲ್ಸ್‌ನಲ್ಲಿ ‘ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್’ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ಪ್ರಧಾನಿ ಮೋದಿ ಅವರು ಹವಾಮಾನ ವೈಪರೀತ್ಯದ ಸವಾಲುಗಳನ್ನು ಎದುರಿಸಲು ಶ್ರಮಿಸುತ್ತಿರುವ ಎಲ್ಲಾ ರಾಷ್ಟ್ರಗಳಿಗೆ ಈ ಗೌರವವನ್ನು ಸಮರ್ಪಿಸಿದರು. ಸೆಶೆಲ್ಸ್ ಅಧ್ಯಕ್ಷ ಡಾ. ಪ್ಯಾಟ್ರಿಕ್ ಹರ್ಮಿನೀ ಅವರೊಂದಿಗೆ ಜಂಟಿ ಪತ್ರಿಕಾ ಪ್ರಕಟಣೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿಯನ್ನು ಪಡೆಯುವುದು ತಮಗೆ ಮತ್ತು ಭಾರತದ 140 ಕೋಟಿ ಜನರಿಗೆ ಅಪಾರ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಮತ್ತು ಹವಾಮಾನ ವೈಪರೀತ್ಯದ ಸವಾಲಿನ ವಿರುದ್ಧ ಹೋರಾಡುತ್ತಿರುವ ಹಾಗೂ ಪರಿಸರ ಸಂರಕ್ಷಣೆಯನ್ನು ಭವಿಷ್ಯದ ಪೀಳಿಗೆಯ ಕಡೆಯ ಜವಾಬ್ದಾರಿ ಎಂದು ಪರಿಗಣಿಸುವ ಎಲ್ಲಾ ರಾಷ್ಟ್ರಗಳಿಗೆ ಇದನ್ನು ಸಮರ್ಪಿಸುತ್ತೇನೆ’ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನೀ ಅವರೊಂದಿಗೆ ಮಾತುಕತೆ ನಡೆಸಿದರು. ದ್ವಿಪಕ್ಷೀಯ ಸಹಕಾರದ ಸಂಪೂರ್ಣ ವ್ಯಾಪ್ತಿಯನ್ನು ಪರಾಮರ್ಶಿಸಿದರು. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು. ಉಭಯ ನಾಯಕರು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು.
3 ದಿನಗಳ ಪ್ರವಾಸಕ್ಕಾಗಿ ಶನಿವಾರ ಸೆಶೆಲ್ಸ್‌ಗೆ ತೆರಳಿದ ಪ್ರಧಾನಿ ಮೋದಿಯವರನ್ನು ಸ್ಟೇಟ್ ಹೌಸ್‌ನಲ್ಲಿ ಅಧ್ಯಕ್ಷ ಹರ್ಮಿನೀ ಅವರು ಸ್ವಾಗತಿಸಿದರು. ಅಧ್ಯಕ್ಷ ಹರ್ಮಿನೀ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಸೋಮವಾರ ನಡೆಯಲಿರುವ ಸೆಶೆಲ್ಸ್ ರಾಷ್ಟ್ರೀಯ ದಿನಾಚರಣೆಯ ಸುವರ್ಣ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅವರು ಸೆಶೆಲ್ಸ್‌ನ ರಾಷ್ಟ್ರೀಯ ಅಸೆಂಬ್ಲಿಯನ್ನು (ಸಂಸತ್) ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೇ, ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಲಿದ್ದಾರೆ.
Seychelles confers 'Guardian of the Blue Horizon' honour on PM Narendra Modi
· Prime Minister Narendra Modi has been conferred the 'Guardian of the Blue Horizon', Seychelles' highest distinction for leadership in environmental conservation and sustainable development
🔗:… pic.twitter.com/65BH9jM6IV
— IANS (@ians_india) June 28, 2026
VIDEO | Seychelles: Addressing a joint press conference, Prime Minister Narendra Modi says, "I express my heartfelt gratitude to President Herminie for our affectionate welcome and gracious hospitality. To be honored by him with the 'Guardian of the Blue Horizon' award is a… pic.twitter.com/gDwjlx5EIS
— Press Trust of India (@PTI_News) June 28, 2026
VIDEO | Seychelles: Prime Minister Narendra Modi holds delegation-level discussions with Seychelles President Patrick Herminie.
(Source: Third Party)
(Full video available on PTI Videos – https://t.co/n147TvrpG7) pic.twitter.com/sdBKnKY7Td
— Press Trust of India (@PTI_News) June 28, 2026
Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!