newsics.com | ನ್ಯೂಸಿಕ್ಸ್
ದಾವಣಗೆರೆ: ಮೂಗಿನ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತಪಟ್ಟಿರುವ ಘಟನೆ ದಾವಣಗೆರೆಯ ನವೋದಯ ಆಸ್ಪತ್ರೆಯಲ್ಲಿ ನಡೆದಿದೆ.
ಈ ಘಟನೆ ಆಸ್ಪತ್ರೆಯ ನಿರ್ಲಕ್ಷ್ಯದ ಆರೋಪಕ್ಕೆ ಕಾರಣವಾಗಿದ್ದು, ಯುವಕನ ಸಾವಿನ ಬಗ್ಗೆ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮೃತ ಯುವಕನನ್ನು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿ ಸೃಜನ್ ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ ಮೂಗು ಚಪ್ಪಟೆಯಾಗಿರುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತಿತ್ತು ಎಂದು ಕುಟುಂಬದವರಿಗೆ ತಿಳಿಸಿದ್ದ ಎನ್ನಲಾಗಿದೆ. ಇದಕ್ಕಾಗಿ ವೈದ್ಯರ ಸಲಹೆ ಮೇರೆಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದನು.
ಆದರೆ ಶಸ್ತ್ರಚಿಕಿತ್ಸೆ ಆರಂಭಿಸುವ ಮುನ್ನವೇ ಯುವಕ ಮೃತಪಟ್ಟಿದ್ದಾನೆ. ಆಸ್ಪತ್ರೆಯವರು ನೀಡಿದ ಔಷಧ ಅಥವಾ ಅನಸ್ತೀಷಿಯಾದ ಓವರ್ಡೋಸ್ನಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಇತ್ತ ಆಸ್ಪತ್ರೆ ಆಡಳಿತವು ಆರೋಪಗಳನ್ನು ತಳ್ಳಿಹಾಕಿದೆ. ಯಾವುದೇ ಶಸ್ತ್ರಚಿಕಿತ್ಸೆ ನಡೆಸಿಲ್ಲ. ಅಲ್ಲದೆ, ಓವರ್ಡೋಸ್ ನೀಡಿರುವ ಪ್ರಶ್ನೆಯೇ ಇಲ್ಲ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.
SIR from tomorrow ನಾಳೆಯಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಬಂದು ಪರಿಶೀಲನೆ
Kukke Subrahmanya ಭಾನುವಾರ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಭಕ್ತರಿಂದ ಸುಬ್ರಹ್ಮಣ್ಯ ದರ್ಶನ!