Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RSS ಅವಹೇಳನ: ಪ್ರಿಯಾಂಕ್ ಖರ್ಗೆ, ನಲ್‌ಪಾಡ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ
ಕರ್ನಾಟಕಪ್ರಮುಖ

RSS ಅವಹೇಳನ: ಪ್ರಿಯಾಂಕ್ ಖರ್ಗೆ, ನಲ್‌ಪಾಡ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

Share
2 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ.

ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 356ರ ಅಡಿ (ಕ್ರಿಮಿನಲ್ ಮಾನಹಾನಿ) ದಂಡನೀಯ ಅಪರಾಧಕ್ಕೆ ಕಾಗ್ನೈಜೆನ್ಸ್ ಪರಿಗಣಿಸಲಾಗಿದೆ. ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ಕಚೇರಿಯು ಕ್ರಿಮಿನಲ್ ಪ್ರಕರಣ ದಾಖಲಿಸಿ, ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಸಮನ್ಸ್ ಜಾರಿಗೊಳಿಸಬೇಕು ಎಂದು ಆದೇಶಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.

ಪ್ರಕರಣವೇನು?: 

ಪ್ರಿಯಾಂಕ್ ಖರ್ಗೆ ಅವರು, 2025ರ ಅಕ್ಟೋಬರ್ 4ರಂದು, ಆರೆಸ್ಸೆಸ್ ನವರು ಸರಕಾರಿ ಜಾಗಗಳು ಮತ್ತು ಶಾಲಾ ಆವರಣದಲ್ಲಿ ಯಾವುದೇ ರೀತಿಯ ಸಮಾರಂಭ ಮತ್ತು ಚಟುವಟಿಕೆ ಮಾಡದಂತೆ ನಿಷೇಧಿಸಬೇಕು. ಅವರು ಜನರಿಗೆ ತಪ್ಪು ಸಂದೇಶ ಕೊಡುತ್ತಿದ್ದು, ದೇಶಕ್ಕೆ ಮಾರಕವಾಗಿದ್ದಾರೆ. ಯುವಕರನ್ನು ತಪ್ಪುದಾರಿಯಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ನಲ್ಲಿ, ಗೌರಿ ಲಂಕೇಶ್, ಪನ್ಸಾರೆ ಹಾಗೂ ಎಂ.ಎಂ. ಕಲಬುರ್ಗಿ ಅವರನ್ನು ಆರೆಸ್ಸೆಸ್‌ನವರು ಹತ್ಯೆ ಮಾಡಿದ್ದಾರೆ. ಅವರೇ ನೇರ ಹೊಣೆಗಾರರಾಗಿದ್ದು, ತಾಲಿಬಾನ್ ಸಂಸ್ಕೃತಿಯವರಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದರು.

ಮತ್ತೊಂದೆಡೆ, ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್, ಆರೆಸ್ಸೆಸ್‌ನವರ ಚಡ್ಡಿಯಲ್ಲಿ ತಾಕತ್ತು ಇಲ್ಲ ಎಂದಿರುವ ವೀಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ಬೆಂಗಳೂರಿನ ಎ.ತೇಜಸ್ ಎಂಬವರು ಖಾಸಗಿ ದೂರು ಸಲ್ಲಿಸಿ, ಆರೋಪಿಗಳು ಆರೆಸ್ಸೆಸ್ ಮಾನಹಾನಿ ಮಾಡಿದ್ದು, ಈ ಮೂಲಕ ಲಕ್ಷಾಂತರ ಕಾರ್ಯಕರ್ತರ ಭಾವನೆಗಳಿಗೆ ಘಾಸಿಯಾಗಿದೆ. ಆದ್ದರಿಂದ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.

Rice expensice ಅಕ್ಕಿ ದರ ಮತ್ತೆ ಭಾರೀ ಹೆಚ್ಚಳ: ಕೆಜಿಗೆ 13 ರೂ. ಏರಿಕೆ

Car Blast Case ಪ್ರೇಯಸಿಗಾಗಿ ಪ್ರಾಣ ಕಳೆದುಕೊಂಡ ಯುವಕ; ಕೊನೆ ಮೂರು ದಿನಗಳ ರಹಸ್ಯ ಬಯಲು!

TAGGED:Court orders registration of criminal case against Priyank KhargeNalpad
Share This Article
Facebook Twitter Copy Link Print
Previous Article Vastu Shastra ಮನೆಗೆ ಪದೇ ಪದೇ ಹಾವು ಬರ್ತಿರೋದರ ಹಿಂದೆ ಅಡಗಿದೆ ನಿಗೂಢ ರಹಸ್ಯ, ವಾಸ್ತು ಶಾಸ್ತ್ರ ಹೇಳೋದೇನು?
Next Article Traffic Fine ಟ್ರಾಫಿಕ್ ಫೈನ್ ಅರ್ಧಕ್ಕರ್ಧ ಕಟ್: ಸವಾರರೇ ಜುಲೈ 10ರ ಒಳಗಡೆ ಈ ಬಂಪರ್ ಆಫರ್ ಮಿಸ್ ಮಾಡ್ಕೋಬೇಡಿ!

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್! ವಿಡಿಯೋ ನೋಡಿ

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?