newsics.com| ನ್ಯೂಸಿಕ್ಸ್
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ತೀವ್ರ ಜಾಗ್ರತೆ ವಹಿಸುವಂತೆ ಕೋರಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಇದರೊಂದಿಗೆ ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಪ್ರಕಟಣೆ ಹೊರಡಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಜಲಪಾತಗಳ ಬಳಿ ಹೋಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಹಳೆಯ ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಎಚ್ಚರಿಸಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
- ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದರೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
- ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
Attendant fired ಮೀಟಿಂಗ್ನಲ್ಲಿ ಅಧಿಕಾರಿಗಳು ತಿಂದುಳಿದ ಬಿಸ್ಕತ್ ಮನೆಗೆ ತಂದ ಜವಾನ ಕೆಲಸದಿಂದಲೇ ವಜಾ!