newsics.com| ನ್ಯೂಸಿಕ್ಸ್
ಅರಣ್ಯ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ತಡೆಗೋಡೆ ದಾಟಲು ಯತ್ನಿಸಿದ ವೇಳೆ ಕಾಡಾನೆಯೊಂದು ಬ್ಯಾರಿಕೇಡ್ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಕನಕಪುರ ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸುರಕ್ಷಿತವಾಗಿ ಬಿಡಿಸುವ ಕಾರ್ಯಾಚರಣೆ ನಡೆಸಿದರು.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ಎಸ್.ಎಸ್ ರೈಲ್ವೆ ಬ್ಯಾರಿಕೇಡ್ ತಡೆಗೋಡೆಗಳ ನಡುವಿನ ಅಂತರವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಿಟ್ಟಿರುವುದೇ ಕಾಡಾನೆ ಸಿಕ್ಕಿಹಾಕಿಕೊಳ್ಳಲು ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.
ತಡೆಗೋಡೆಗಳ ನಡುವಿನ ಅಂತರ ಮರುಪರಿಶೀಲಿಸಿ ಸೂಕ್ತ ಬದಲಾವಣೆ ಮಾಡದಿದ್ದರೆ ಇಂತಹ ಘಟನೆಗಳು ಮರುಕಳಿಸಿ ಮೂಕ ಪ್ರಾಣಿಗಳ ಜೀವಕ್ಕೆ ಕುತ್ತು ಬರಬಹುದು. ವನ್ಯಜೀವಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ತಜ್ಞರ ಸಲಹೆಯೊಂದಿಗೆ ಬ್ಯಾರಿಕೇಡ್ಗಳನ್ನು ಮರುವಿನ್ಯಾಸಗೊಳಿಸಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.