Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ
ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

Share
1 Min Read
SHARE

newsics.com| ನ್ಯೂಸಿಕ್ಸ್

ಮದುವೆಯಾಗುವುದಾಗಿ ನಂಬಿಸಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ರವಿಕಿರಣ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಸಂತ್ರಸ್ತೆ ಹಾಗೂ ಆಕೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಈತ ಅದೇ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನೇ ತನ್ನ ವಿಕೃತ ಆಸೆಗೆ ಟಾರ್ಗೆಟ್ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ.

2025ರಲ್ಲಿ ಕಾಲೇಜಿನಲ್ಲಿ ಉಪನ್ಯಾಸಕ ರವಿಕಿರಣ್ ಹಾಗೂ ವಿದ್ಯಾರ್ಥಿನಿ ನಡುವೆ ಪರಿಚಯವಾಗಿ ಸ್ನೇಹ ಬೆಳೆದಿದೆ. ಇಬ್ಬರ ನಡುವೆ ಸಲುಗೆ ಹೆಚ್ಚಾಗುತ್ತಿದ್ದಂತೆ, ಆರೋಪಿಯು ವಿದ್ಯಾರ್ಥಿನಿಗೆ “ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ” ಎಂದು ನಂಬಿಸಿದ್ದಾನೆ. ಹೆತ್ತವರ ಮತ್ತು ಸಮಾಜದ ವಿರೋಧದ ನಡುವೆಯೂ ಬಾಲಕಿಯನ್ನು ಪುಸಲಾಯಿಸಿ, ಪದೇಪದೇ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

ದಿನಗಳು ಉರುಳುತ್ತಿದ್ದಂತೆ ಉಪನ್ಯಾಸಕ ರವಿಕಿರಣ್‌ನ ಅಸಲಿ ಮುಖ ಮತ್ತು ಆತನ ಹಿನ್ನೆಲೆ ಹೊರಬಿದ್ದಿದೆ. ಆತನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿರುವ ಸತ್ಯ ತಡವಾಗಿ ಬೆಳಕಿಗೆ ಬಂದಿದೆ. ಇದನ್ನು ತಿಳಿದ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಂಬಿದ ವ್ಯಕ್ತಿಯೇ ಇಷ್ಟೊಂದು ದೊಡ್ಡ ದ್ರೋಹ ಎಸಗಿದ್ದಾನೆ ಎಂಬುದನ್ನು ಅರಿತ ಪೋಷಕರು ತಕ್ಷಣವೇ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಬಾಲಕಿಯ ಪೋಷಕರು ತಡಮಾಡದೇ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಉಪನ್ಯಾಸಕನ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಪೋಷಕರು ನೀಡಿದ ದೂರಿನ ಅನ್ವಯ ಅತ್ಯಂತ ಗಂಭೀರವಾದ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಕಾಮುಕ ಉಪನ್ಯಾಸಕ ರವಿಕಿರಣ್‌ನನ್ನು ಬಳ್ಳಾರಿ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

TAGGED:#bellary #lecturer #femalestudent #sexualharassment #news #newsics
Share This Article
Facebook Twitter Copy Link Print
Previous Article Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ
Next Article Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

Popular Posts

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read

You Might Also Like

ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read
ಕರ್ನಾಟಕಪ್ರಮುಖ

High court styas 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

2 Min Read
ದೇಶಪ್ರಮುಖರಿಲೇಷನ್‌ಶಿಪ್ವೈರಲ್

Insta Love Story: 3 ವರ್ಷ ಲವ್ ಮಾಡಿ ಮದುವೆ, ಫಸ್ಟ್​ ನೈಟ್ ಮುನ್ನ ಗೊತ್ತಾಯ್ತು ಅವಳಲ್ಲ ಅವನು’!

2 Min Read
ಕರ್ನಾಟಕಪ್ರಮುಖ

KSRTC: ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – ಶೇ12.5ರಷ್ಟು ವೇತನ ಹೆಚ್ಚಿಸಿದ ಸರ್ಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?