Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > US Navy ಅರಬ್ಬಿ ಸಮುದ್ರದಲ್ಲಿ ಅಮೆರಿಕ ಯುದ್ಧ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್: ಮೂವರ ರಕ್ಷಣೆ, ಮತ್ತೊಬ್ಬನಿಗಾಗಿ ತೀವ್ರ ಶೋಧ!
ಪ್ರಮುಖವಿದೇಶ

US Navy ಅರಬ್ಬಿ ಸಮುದ್ರದಲ್ಲಿ ಅಮೆರಿಕ ಯುದ್ಧ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್: ಮೂವರ ರಕ್ಷಣೆ, ಮತ್ತೊಬ್ಬನಿಗಾಗಿ ತೀವ್ರ ಶೋಧ!

Share
2 Min Read
SHARE

newsics.com | ನ್ಯೂಸಿಕ್ಸ್

ಮನಾಮ: ಇರಾನ್ ದೇಶದ ಜೊತೆಗಿನ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಅರಬ್ಬಿ ಸಮುದ್ರದಲ್ಲಿ ಅಮೆರಿಕ ನೌಕಾಪಡೆಗೆ (US Navy) ಸೇರಿದ ಅತ್ಯಾಧುನಿಕ ಯುದ್ಧ ಹೆಲಿಕಾಪ್ಟರ್ ಒಂದು ತುರ್ತು ಪರಿಸ್ಥಿತಿಯಿಂದಾಗಿ ಸಮುದ್ರದ ನೀರಿನ ಮೇಲೆಯೇ ಲ್ಯಾಂಡಿಂಗ್ ಆಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸೈನಿಕರ ಪೈಕಿ ಮೂವರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಸಿಬ್ಬಂದಿಗಾಗಿ ಸಮುದ್ರದಲ್ಲಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ವಿಶ್ವದ ಅತ್ಯಂತ ಪ್ರಭಾವಿ ಯುದ್ಧನೌಕೆ ‘ಯುಎಸ್ಎಸ್ ಜಾರ್ಜ್ ಎಚ್.ಡಬ್ಲ್ಯೂ ಬುಷ್’ಗೆ ಸೇರಿದ ‘MH-60S ಸೀ ಹಾಕ್’ ಹೆಲಿಕಾಪ್ಟರ್ ಮುಂಜಾನೆ 3:3o ಗಂಟೆಯ ಸುಮಾರಿಗೆ ನಿಯಂತ್ರಣ ಕಳೆದುಕೊಂಡಿದೆ. ಪೈಲಟ್‌ ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಸಮುದ್ರದ ನೀರಿನ ಮೇಲೆಯೇ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಅಲರ್ಟ್ ಆದ ನೌಕಾಪಡೆಯ ರಕ್ಷಣಾ ದಳವು ಮೂವರು ಸೈನಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಿ ಮುಖ್ಯ ಹಡಗಿಗೆ ಕರೆತಂದಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದರೆ ನಾಲ್ಕನೇ ಸಿಬ್ಬಂದಿಯ ಪತ್ತೆಗಾಗಿ ಅಮೆರಿಕ ನೌಕಾಪಡೆಯ ಹಡಗುಗಳು ಮತ್ತು ವಿಮಾನಗಳು ಸಮುದ್ರದಾದ್ಯಂತ ತೀವ್ರ ಹುಡುಕಾಟ ನಡೆಸುತ್ತಿವೆ.

ಪ್ರಸ್ತುತ ಕೊಲ್ಲಿ ವಲಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಕಾರ್ಮೋಡ ಕವಿದಿರುವುದರಿಂದ, ಈ ಹೆಲಿಕಾಪ್ಟರ್ ಮೇಲೆ ಇರಾನ್ ಅಥವಾ ಅದರ ಬೆಂಬಲಿತ ಪಡೆಗಳು ಕ್ಷಿಪಣಿ ದಾಳಿ ನಡೆಸಿರಬಹುದು ಎಂಬ ಭೀತಿ ಜಾಗತಿಕ ಮಟ್ಟದಲ್ಲಿ ಮೂಡಿತ್ತು. ಆದರೆ ಈ ಅನುಮಾನಗಳನ್ನು ತಳ್ಳಿಹಾಕಿರುವ ಯುಎಸ್ ನೌಕಾಪಡೆಯ ಕಮಾಂಡರ್ಸ್, ಇದು ಶತ್ರು ಪಡೆಗಳ ಯಾವುದೇ ದಾಳಿಯಿಂದ ಸಂಭವಿಸಿದ್ದಲ್ಲ, ಕೇವಲ ಆಕಸ್ಮಿಕ ತಾಂತ್ರಿಕ ವೈಫಲ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಘಟನೆಯ ಇಂಚಿಂಚು ವಿವರ ಪಡೆಯಲು ಉನ್ನತ ಮಟ್ಟದ ಮಿಲಿಟರಿ ತನಿಖೆಗೆ ಆದೇಶಿಸಲಾಗಿದೆ.

ಮಾರ್ಚ್ ತಿಂಗಳ ಕೊನೆಯಲ್ಲಿ ಅಮೆರಿಕದ ಕರಾವಳಿಯಿಂದ ಹೊರಟಿದ್ದ ಈ ದೈತ್ಯ ಹೆಲಿಕಾಪ್ಟರ್ ಪಡೆಗಳು, ಆಫ್ರಿಕಾ ಖಂಡದ ಮೂಲಕ ಸಾಗಿ ಏಪ್ರಿಲ್ ತಿಂಗಳಿನಲ್ಲಿ ಅರಬ್ಬಿ ಸಮುದ್ರವನ್ನು ಪ್ರವೇಶಿಸಿದ್ದವು. ಈ ವಲಯದಲ್ಲಿ ಚಲಿಸುವ ಅಮೆರಿಕದ ತೈಲ ಹಾಗೂ ಸರಕು ಸಾಗಣೆ ಹಡಗುಗಳಿಗೆ ಇರಾನ್‌ನಿಂದ ರಕ್ಷಣೆ ನೀಡುವುದು ಈ ಪಡೆಯ ಮುಖ್ಯ ಜವಾಬ್ದಾರಿಯಾಗಿದೆ.

ಯುದ್ಧಕಾಲದಲ್ಲಿ ಶತ್ರುಗಳ ಮೇಲೆ ನಿಗಾ ಇಡಲು ಮತ್ತು ಸೈನಿಕರ ತುರ್ತು ರಕ್ಷಣೆಗೆ ಬಳಸಲಾಗುವ ಈ ‘ಸೀ ಹಾಕ್’ ಹೆಲಿಕಾಪ್ಟರ್‌ನ ಮತ್ತೊಬ್ಬ ಯೋಧನನ್ನು ಪತ್ತೆಹಚ್ಚಲು ಅಮೆರಿಕನ್ ಕಮಾಂಡೋಗಳು ಈಗ ಸಮಯದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

 

Crime Case ತ್ರಿವಳಿ ಕೊ*ಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಶವ ಸುಡಲು ಡ್ರಮ್‌ ರೆಡಿ ಮಾಡಿದ್ದ ಹಂತಕರು! ಮರ್ಡರ್ ಕೇಸ್‌ನಲ್ಲಿ ಬಯಲಾಯ್ತು ಅಸಲಿ ಸ್ಕೆಚ್

TAGGED:#navy #america #helicopter #landing #sea
Share This Article
Facebook Twitter Copy Link Print
Previous Article Crime Case ತ್ರಿವಳಿ ಕೊ*ಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಶವ ಸುಡಲು ಡ್ರಮ್‌ ರೆಡಿ ಮಾಡಿದ್ದ ಹಂತಕರು! ಮರ್ಡರ್ ಕೇಸ್‌ನಲ್ಲಿ ಬಯಲಾಯ್ತು ಅಸಲಿ ಸ್ಕೆಚ್
Next Article Bangalore quarry ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು,‌ ಹಲವರಿಗೆ ಗಾಯ

Popular Posts

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

You Might Also Like

ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read
ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?