newsics.com | ನ್ಯೂಸಿಕ್ಸ್
ಲಕ್ನೋ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಟೋಲ್ ಪ್ಲಾಜಾ ಬಳಿ ನಡೆದಿದ್ದ ಎಲ್‌ಪಿಜಿ ಸಿಲಿಂಡರ್ ತುಂಬಿದ್ದ ಟ್ಯಾಂಕರ್ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಮಾಂಚನಕಾರಿ ಸಿಸಿಟಿವಿ (CCTV) ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಈ ನರಕಸದೃಶ ದುರಂತದಲ್ಲಿ ನಾಲ್ಕು ಜೀವಗಳು ಸಜೀವ ದಹನಗೊಂಡಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಗ್ಯಾಸ್ ಟ್ಯಾಂಕರ್
ಕೋಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹೋರಿ ಟೋಲ್ ಪ್ಲಾಜಾದಲ್ಲಿ ಈ ಭೀಕರ ಅವಘಡ ಸಂಭವಿಸಿದೆ. ಕಾನ್ಪುರದಿಂದ ವಾರಣಾಸಿ ಕಡೆಗೆ ಅತಿ ವೇಗವಾಗಿ ಸಾಗುತ್ತಿದ್ದ ಎಲ್‌ಪಿಜಿ ಸಿಲಿಂಡರ್ ತುಂಬಿದ್ದ ಬೃಹತ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಟೋಲ್‌ನ ಡಿವೈಡರ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ನಿಂದ ಗ್ಯಾಸ್ ಇಡೀ ಪ್ರದೇಶಕ್ಕೆ ಸೋರಿಕೆಯಾಗಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಟೋಲ್ ಪ್ಲಾಜಾವನ್ನು ಬೆಂಕಿಯ ಜ್ವಾಲೆಗಳು ಆವರಿಸಿಕೊಂಡಿವೆ.
Terrifying footage of an LPG leak from a tanker at a toll plaza that erupted into an inferno in mere seconds. pic.twitter.com/lWUMriBzJu
— Piyush Rai (@Benarasiyaa) July 3, 2026
ಟ್ಯಾಂಕರ್ ಚಾಲಕ, ಮಿರ್ಜಾಪುರ ಮೂಲದ ಧರ್ಮೇಂದ್ರ ದ್ವಿವೇದಿ ಎಂಬಾತ ಬೆಂಕಿಯ ಕೆನ್ನಾಲಿಗೆಯಿಂದ ಹೊರಬರಲಾರದೆ ಕ್ಯಾಬಿನ್ ಒಳಗಡೆಯೇ ಸಜೀವವಾಗಿ ದಹನಗೊಂಡಿದ್ದಾನೆ. ಈ ಭೀಕರ ಸ್ಫೋಟದ ತೀವ್ರತೆಗೆ ಸುತ್ತಮುತ್ತ ನಿಂತಿದ್ದ ಇತರ ಮೂವರು ಕೂಡ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯ ವೇಳೆ ಕರ್ತವ್ಯದಲ್ಲಿದ್ದ ಟೋಲ್ ಪ್ಲಾಜಾದ ಐವರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪ್ರಯಾಗ್‌ರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಸಿಸಿಟಿವಿ ದೃಶ್ಯಗಳು ಸಾರ್ವಜನಿಕರಲ್ಲಿ ನಡುಕ ಹುಟ್ಟಿಸಿವೆ.
Tragedy ಕಲ್ಲು ಕ್ವಾರಿ ದುರಂತ: 7 ಕಾರ್ಮಿಕರ ಸಾ*ವು ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್!