Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್
ಕರ್ನಾಟಕದೇಶಪ್ರಮುಖ

Kalaburgi ‘ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ’ – ಪ್ರಿಯಾಂಕ್ ಖರ್ಗೆ ವಾರ್ನಿಂಗ್

Share
1 Min Read
SHARE

newsics.com| ನ್ಯೂಸಿಕ್ಸ್

‘ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಅವಕಾಶ ಸಿಕ್ಕಾಗಲೆಲ್ಲಾ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಸಂಘಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.

ಕಲಬುರಗಿಯ ಐವಾನ್ ಎ ಶಾಹಿ ಪ್ರದೇಶದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ‘ನಾನು ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ’ ಎಂದು ಲೇವಡಿ ಮಾಡಿದ್ದಾರೆ.

ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರು ನನ್ನ ವೈಯಕ್ತಿಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಯಾರನ್ನ ಮದುವೆಯಾಗಿದ್ದಾನೆ? ಆತನ ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ ಅಥವಾ ಬೆಳ್ಳಗಿದ್ದಾನಾ? ಎಂದು ಕೆದಕುತ್ತಿದ್ದಾರೆ. ಅವರು ಎಷ್ಟೇ ಕೆದಕಿದರೂ ನಾನು ಹೆದರುವ ವ್ಯಕ್ತಿಯಲ್ಲ. ನನ್ನ ಬಣ್ಣದ ಬಗ್ಗೆ ಮಾತನಾಡುವವರಿಗೆ ನನ್ನ ಕೆಲಸಗಳೇ ಉತ್ತರ ನೀಡುತ್ತವೆ ಎಂದು ಸವಾಲು ಹಾಕಿದ್ದಾರೆ. ಒಟ್ಟಿನಲ್ಲಿ ಪಥಸಂಚಲನದ ವಿಚಾರವಾಗಿ ಪ್ರಿಯಾಂಕ್ ಖರ್ಗೆ ತೆಗೆದುಕೊಂಡಿರುವ ಈ ಕಠಿಣ ನಿಲುವು ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಹಾಗೂ ಪ್ರತಿಭಟನೆಗೆ ಕಾರಣವಾಗುವ ಸಾಧ್ಯತೆಯಿದೆ.

ಇದೇ ವೇಳೆ ಅಯೋಧ್ಯೆಯ ರಾಮಮಂದಿರದ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ ಸಚಿವರು, ರಾಮಮಂದಿರದ ಕಟ್ಟಡದ ಉಸ್ತುವಾರಿ ಹೊತ್ತಿದ್ದ ಗೋಪಾಲ್ ಜೀ ಅವರು 40 ಪರ್ಸೆಂಟ್ ಕಮಿಷನ್ ಪಡೆದು ತಮ್ಮ ಅಳಿಯನಿಗೆ ಕಾಂಟ್ರಾಕ್ಟ್ ನೀಡಿದ್ದಾರೆ. ಅಯೋಧ್ಯೆಯಲ್ಲೂ ಬಿಜೆಪಿ ಬಿಟ್ಟಿಲ್ಲ ಅಲ್ಲೂ ಕಮಿಷನ್ ದಂಧೆ ನಡೆದಿದೆ. ಇದೆಲ್ಲವೂ ದೊಡ್ಡ ಗೇಮ್ ಪ್ಲಾನ್ ಎಂದು ಕಿಡಿಕಾರಿದರು.

Fifa world cup ‘ಇದು ನನ್ನ ಕೊನೆಯ ವಿಶ್ವಕಪ್, ಆದರೆ ನಾಳೆಯೇ ನನ್ನ ಕೊನೆಯ ಪಂದ್ಯವಲ್ಲ ಎಂದು ಭಾವಿಸುತ್ತೇನೆ’ : ರೊನಾಲ್ಡೊ ವಿದಾಯ ಘೋಷಣೆ

Share This Article
Facebook Twitter Copy Link Print
Previous Article Duble murder ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪರಾರಿ ಅದ ಪತಿ ಅರೆಸ್ಟ್
Next Article Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

Popular Posts

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read
ಕರ್ನಾಟಕದೇಶಪ್ರಮುಖ

Ayodhye ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್‌ ರಾಯ್‌ ರಾಜೀನಾಮೆ ಅಂಗೀಕರಿಸಿದ ಟ್ರಸ್ಟ್

1 Min Read
ದೇಶಪ್ರಮುಖ

Love story ಪ್ರೀತಿಗಾಗಿ 8 ಲಕ್ಷ ರೂ.ಸಾಲ ಮಾಡಿ ಲಿಂಗ ಪರಿವರ್ತಿಸಿದ ರಾಖಿ, ಈಗ ರಾಹುಲ್ ಆಗಿ ಪರಿವರ್ತನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?