Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather forecast ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರೀ‌ ಮಳೆ ಸಾಧ್ಯತೆ
ಕರ್ನಾಟಕದೇಶಪ್ರಮುಖ

Weather forecast ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರೀ‌ ಮಳೆ ಸಾಧ್ಯತೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕರಾವಳಿ ತೀರದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಿಗ್ ಅಲರ್ಟ್ ಘೋಷಿಸಲಾಗಿದೆ. ಜುಲೈ 8ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರ ಮುಂದುವರಿಯಲಿದ್ದು, ‘ರೆಡ್ ಅಲರ್ಟ್’ ಜಾರಿಗೊಳಿಸಲಾಗಿದೆ.

ಮಲೆನಾಡು ಮತ್ತು ಇತರೆ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮುಂಗಾರು ಚುರುಕಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭೂಕುಸಿತ (Landslide) ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ಕಾರವಾರದಲ್ಲಿ ಕಡಲಕೊರೆತ: 

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಅಂಕೋಲಾ ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದೆ. ಹಾರವಾಡದಲ್ಲಿ ಕಡಲಕೊರೆತ ತೀವ್ರಗೊಂಡಿದ್ದು, ರಕ್ಕಸ ಅಲೆಗಳು ತೀರದ ಮನೆಗಳ ಅಂಗಳಕ್ಕೆ ಅಪ್ಪಳಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಸಮುದ್ರದ ಪಾಲಾಗುವ ಭೀತಿಯಲ್ಲಿದ್ದ ಸತೀಶ ಹರಿಕಂತ್ರ ಹಾಗೂ ಸುಮಿತ್ರ ಹರಿಕಂತ್ರ ಎಂಬುವರ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ದೂದಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 11 ಅಡಿಯಷ್ಟು ನೀರು ಹೆಚ್ಚಾಗಿದ್ದು, ನಿಪ್ಪಾಣಿ ತಾಲೂಕಿನ ಕೆಳಹಂತದ ಪ್ರಮುಖ 3 ಸೇತುವೆಗಳಾದ ಕಾರದಗಾ-ಬೋಜ್ ಸೇತುವೆ, ಬೋಜವಾಡಿ-ಭೋಜ್ ಸೇತುವೆ, ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡಿವೆ.

ಸಿಲಿಕಾನ್ ಸಿಟಿಯಲ್ಲಿ ಶೀತ ಗಾಳಿ:

ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದಲ್ಲಿ ವಾತಾವರಣ ಸಂಪೂರ್ಣ ತಂಪಾಗಿದ್ದು, ಜಿಟಿಜಿಟಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ರಾತ್ರಿಯ ವೇಳೆಗೆ ನಗರದಾದ್ಯಂತ ಮಳೆ ಚುರುಕಾಗುವ ಸಾಧ್ಯತೆ ಇದೆ.

 

TAGGED:Low pressure in the Bay of Bengal: Heavy rain likely in many parts of the state
Share This Article
Facebook Twitter Copy Link Print
Previous Article PSI Arrest ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಮಂಕಿ ಠಾಣೆ ಪಿಎಸ್‌ಐ ಬಂಧನ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Snake venom ಚಪ್ಪಲಿಯನ್ನೇ ಕಚ್ಚಿ ವಿಷ ಕಾರಿದ ಹಾವು! ವಿಡಿಯೋ ನೋಡಿ ಗಾಬರಿಯಾಗಬೇಡಿ…

1 Min Read

Rapido ಬೈಕ್ ಸವಾರನ ವೇಗದ ಚಾಲನೆ: ಈ ಯುವತಿಗೆ 20 ದಿನಗಳಿಂದ ಆಸ್ಪತ್ರೆಯಲ್ಲಿ ಯಾತನೆ

1 Min Read

Ancient ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ

2 Min Read

Tirupati 116ರ ಅಜ್ಜಿಗೆ ರಾಷ್ಟ್ರಪತಿ ಮಾದರಿಯ ‘ವಿಶೇಷ ವಿಐಪಿ ಬ್ರೇಕ್ ದರ್ಶನ’ ನೀಡಿದ ಟಿಟಿಡಿ

3 Min Read

You Might Also Like

ಕರ್ನಾಟಕದೇಶಪ್ರಮುಖ

Egg & Chicken Price Hike ಮಾಂಸ ಪ್ರಿಯರಿಗೆ ಶಾಕ್ : ಚಿಕನ್ ಮೊಟ್ಟೆ ಬೆಲೆಯಲ್ಲಿ ಏರಿಕೆ

1 Min Read
ದೇಶಪ್ರಮುಖ

Tender coconut trouble ಎಳನೀರಿನಿಂದ‌ ನಿಯಂತ್ರಣ ತಪ್ಪಿದ ಕಾರು! ಖ್ಯಾತ ಅರ್ಚಕ ಸೇರಿ ಇಬ್ಬರ ಸಾವು

1 Min Read
ಕರ್ನಾಟಕದೇಶಪ್ರಮುಖ

Ayodhye ರಾಮಮಂದಿರದ ಹುಂಡಿ ಹಣ ದುರುಪಯೋಗ : ಗರ್ಲ್ ಫ್ರೆಂಡ್ ಗೆ ಐಫೋನ್, ಮನೆ, ಕಾರು ಖರೀದಿಸಿದ ಆರೋಪಿ

2 Min Read
ಕರ್ನಾಟಕದೇಶಪ್ರಮುಖ

Mobile ಆ್ಯಪ್ ಮೂಲಕ ಆನ್ಲೈನ್ ನಲ್ಲಿ ಮಾಡಿಕೊಳ್ಳಬಹುದು SIR: ಇಲ್ಲಿವೆ 4 ಸರಳ ಹಂತಗಳು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?