newsics.com | ನ್ಯೂಸಿಕ್ಸ್
ಬೆಂಗಳೂರು: ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಆಹಾರ ಇಲಾಖೆಯ ಎಂ.ಡಿ ಆಗಿರುವ ಎಂ.ಕೆ. ಜಗದೀಶ್ ಅವರ ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾವೇರಿ ಭವನ, ಯಲಹಂಕ ತಹಶೀಲ್ದಾರ್ ಕಚೇರಿ ಮತ್ತು ದೇವನಹಳ್ಳಿಯಲ್ಲಿರುವ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ.
ದಾಳಿಗೆ ಕಾರಣವೇನು?
ಎಂ.ಕೆ. ಜಗದೀಶ್ ಅವರು ಈ ಹಿಂದೆ ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು. ಆ ಸಮಯದಲ್ಲಿ ಅವರು ಯಲಹಂಕದಲ್ಲಿ ನಿಯಮಗಳನ್ನು ಮೀರಿ, ಅರ್ಹರಲ್ಲದ ಬೇರೆ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಿದ್ದರು ಎಂಬ ದೂರು ಕೇಳಿಬಂದಿತ್ತು.
ಕಳೆದ 2023 ರಲ್ಲಿ ಇವರು ಕಾನೂನುಬಾಹಿರವಾಗಿ 9 ಮತ್ತು 2 ಎಕರೆ ಸರ್ಕಾರಿ ಜಮೀನನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡಿದ್ದರು ಎನ್ನಲಾಗಿದೆ. ಈ ಬಗ್ಗೆ ಕೇಸ್ ದಾಖಲಾಗಿದ್ದರಿಂದ, ಇಂದು ಲೋಕಾಯುಕ್ತ ಅಧಿಕಾರಿಗಳು ಜಗದೀಶ್ ಅವರ ಕಚೇರಿಗಳ ಮೇಲೆ ದಾಳಿ ಮಾಡಿ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು