Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SIR Karnataka ಎಸ್ಐಆರ್ ಫಾರ್ಮ್ ಹಿಂತಿರುಗಿಸದಿದ್ದರೆ ನಿಮಗೆ ಭಾರೀ ಸಂಕಷ್ಟ!
ಕರ್ನಾಟಕಪ್ರಮುಖ

SIR Karnataka ಎಸ್ಐಆರ್ ಫಾರ್ಮ್ ಹಿಂತಿರುಗಿಸದಿದ್ದರೆ ನಿಮಗೆ ಭಾರೀ ಸಂಕಷ್ಟ!

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.

Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ!

ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್‌ಒ) ಪಡೆದ ಗಣತಿ ನಮೂನೆಯನ್ನು ಭರ್ತಿ ಮಾಡಿ, ಸಹಿಯೊಂದಿಗೆ ವಾಪಸ್ ನೀಡದಿದ್ದರೆ ಅಂತಹ ಮತದಾರರ ಹೆಸರುಗಳು ಮುಂಬರುವ ಕರಡು ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಡಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಚ್ಚರಿಸಿದ್ದಾರೆ.

ಆನ್ ಲೈನ್ ಅಥವಾ ಆಫ್ ಲೈನ್ ಯಾವುದೇ ಮೂಲಕ ಅರ್ಜಿ ಸಲ್ಲಿಸಿದ್ದರೂ, ಕೇವಲ ಒಂದು ಅರ್ಜಿಯನ್ನು ಮಾತ್ರವೇ ಪರಿಗಣಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಒಟ್ಟು 5.54 ಕೋಟಿ ಮತದಾರರು ಈ ಎಸ್‌ಐಆರ್ ವ್ಯಾಪ್ತಿಗೆ ಒಳಪಡಲಿದ್ದಾರೆ. ಜೂನ್ 30ರಿಂದ ಆರಂಭವಾಗಿರುವ ಈ ಮನೆ-ಮನೆ ಗಣತಿ ಕಾರ್ಯದಲ್ಲಿ ಈಗಾಗಲೇ ಜುಲೈ 8ರ ವೇಳೆಗೆ ಸುಮಾರು 4.57 ಕೋಟಿ ನಮೂನೆಗಳನ್ನು ಬಿಎಲ್‌ಒಗಳು ವಿತರಿಸಿದ್ದಾರೆ.

ಯಾರಾದರೂ ಮತದಾರರು ಬಿಎಲ್‌ಒಗಳಿಗೆ ನೇರವಾಗಿ ನಮೂನೆ ತಲುಪಿಸಲು ಸಾಧ್ಯವಾಗದಿದ್ದರೆ, ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳು (ಬಿಎಲ್‌ಎ) ತಲಾ 50 ಮತದಾರರ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಿ ಸಂಬಂಧಪಟ್ಟ ಬಿಎಲ್‌ಒಗಳಿಗೆ ತಲುಪಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ 2002ರ ಹಳೆಯ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಪ್ರಸ್ತುತ ನೀಡಲಾಗಿರುವ ಗಣತಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಸಹಿ ಹಾಕಿ ಬಿಎಲ್‌ಒಗಳಿಗೆ ನೀಡಿದರೆ ಅವರ ಹೆಸರು ಕಡ್ಡಾಯವಾಗಿ ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ. ವಿವರಗಳಲ್ಲಿ ಹೊಂದಾಣಿಕೆ ಇಲ್ಲದಿದ್ದರೆ ಅಧಿಕಾರಿಗಳು ನೋಟಿಸ್ ನೀಡಲಿದ್ದು, ಆ ವೇಳೆ ಆಯೋಗ ನಿಗದಿಪಡಿಸಿರುವ 11 ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕಾಗುತ್ತದೆ.

ಕಾನೂನಿನ ಚೌಕಟ್ಟನ್ನು ಮೀರಿ ಗುಂಪು ಗುಂಪಾಗಿ ಗಣತಿ ನಮೂನೆಗಳನ್ನು ವಿತರಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಕಡೆಗಳಿಂದ ದೂರುಗಳು ಬಂದಿವೆ. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ, ಈಗಾಗಲೇ ರಾಜ್ಯದ 35 ಬಿಎಲ್‌ಒಗಳಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅವರ ಉತ್ತರದ ಆಧಾರದ ಮೇಲೆ ಮುಂದಿನ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅನ್ಬುಕುಮಾರ್ ತಿಳಿಸಿದ್ದಾರೆ.

Strange first night ಇಲ್ಲಿನ ಫಸ್ಟ್ ನೈಟ್‌ನಲ್ಲಿ ಹುಡುಗಿಯ ತಾಯಿಯೂ ಇರ್ತಾಳೆ!

Rain Alert ಮುಂದಿನ 24 ಗಂಟೆ ಭೀಕರ ಮಳೆ: ಯಾವೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಹೈ ಅಲರ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು

Share This Article
Facebook Twitter Copy Link Print
Previous Article Alcohol ಆಲ್ಕೋಹಾಲ್ ಪ್ರಿಯರೇ ಎಚ್ಚರ: ನಿಮ್ಮ ಹಾರ್ಟ್ ಸುರಕ್ಷಿತವಾಗಿರಬೇಕಾದ್ರೆ ಇಂದೇ ಈ ಕೆಲಸ ಮಾಡಿ
Next Article LPG flood ಭಾರೀ ಮಳೆಗೆ ನದಿಯಲ್ಲಿ ಕೊಚ್ಚಿಹೋದ 3 ಸಾವಿರಕ್ಕೂ ಹೆಚ್ಚು LPG ಸಿಲಿಂಡರ್‌ಗಳು: ವೈರಲ್ ವಿಡಿಯೋ ನೋಡಿ

Popular Posts

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

You Might Also Like

ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?