newsics.com | ನ್ಯೂಸಿಕ್ಸ್
ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪ್ರಕಾಶ್ ಕುಮಾರ್ ಯರಪ್ಪ ಎಂಬುವವರು ಈ ಸಂಬಂಧ ದೂರು ನೀಡಿದ್ದರು. ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಗಳು, ಅವರಿಂದ ಹಂತ ಹಂತವಾಗಿ ಒಟ್ಟು 45 ಲಕ್ಷ ರೂಪಾಯಿ ಹಣ ಪಡೆದು ನಂಬಿಕೆ ದ್ರೋಹ ಎಸಗಿದ್ದರು. ಈ ಕುರಿತು ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹ ಸ್ವಾಮಿ ಅವರು ಮೊದಲ ಆರೋಪಿ (A1) ಆಗಿದ್ದರು. ಆದರೆ, ವಿಚಾರಣೆ ಬಾಕಿ ಇರುವಾಗಲೇ ಅವರು ಮೃತಪಟ್ಟ ಕಾರಣ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿತ್ತು.
ಎರಡನೇ ಆರೋಪಿಯಾಗಿದ್ದ ನರಸಿಂಹ ಸ್ವಾಮಿ ಅವರ ಪತ್ನಿ ನಾಗವೇಣಿ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
BSNL ಕ್ರಾಂತಿಕಾರಕ ಮೊಬೈಲ್ ಬಿಡುಗಡೆ ಮಾಡಿದ ಬಿಎಸ್‌ಎನ್‌ಎಲ್! ಇದು ಅಂತಿಂಥ ಪೋನ್ ಅಲ್ಲ, ಬೆಲೆಯೂ ಕಡಿಮೆಯಿಲ್ಲ
Female student dies ಶಿಕ್ಷಕಿ ಬೈದಿದ್ದಕ್ಕೆ ಜೀವ ಕಳೆದುಕೊಂಡ ಎಂಟನೇ ತರಗತಿ ವಿದ್ಯಾರ್ಥಿನಿ