Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ayodhya scam effect ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಹುಂಡಿಗೆ ಸಿಸಿಟಿವಿ ಕಣ್ಗಾವಲು: ಸಿಎಂ ಡಿಕೆ
ಕರ್ನಾಟಕಪ್ರಮುಖ

Ayodhya scam effect ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಹುಂಡಿಗೆ ಸಿಸಿಟಿವಿ ಕಣ್ಗಾವಲು: ಸಿಎಂ ಡಿಕೆ

Share
1 Min Read
SHARE

newsics.com | ನ್ಯೂಸಿಕ್ಸ್

ಅಯೋಧ್ಯೆಯಲ್ಲಿ ರಾಮ ಮಂದಿರ ಹುಂಡಿ ಕಳವು ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲಿ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಅಂಥ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ  ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ ಸಿಎಂ, ‘ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಈ ಕ್ಯಾಮೆರಾಗಳನ್ನು ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಪೊಲೀಸ್‌ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಲಾಗುತ್ತದೆ’ ಎಂದರು.

‘ಹುಂಡಿ ಇರುವ ಸ್ಥಳ, ಹಣ ಎಣಿಕೆ ಸ್ಥಳ ಸೇರಿದಂತೆ ದೇವಸ್ಥಾನದ ಎಲ್ಲ ಭಾಗಗಳಲ್ಲಿ ಸಿಸಿಟೀವಿ ಹಾಕಲಾಗುತ್ತದೆ. ದೇಗುಲದ ಚಟುವಟಿಕೆಗಳ ಮೇಲೆ ದಿನದ 24 ಗಂಟೆ ನಿಗಾ ಇಡಲಾಗುತ್ತದೆ’ ಎಂದರು.

ಭಕ್ತರ ಭಾವನೆಗೆ ಘಾಸಿ:

‘ಇತ್ತೀಚೆಗೆ ದೇವಾಲಯದಲ್ಲಿ ನಡೆದ ದೇಣಿಗೆ ಕಳವು ಪ್ರಕರಣ ಸರ್ಕಾರಕ್ಕೆ ಹಾಗೂ ಭಕ್ತರಿಗೆ ಮಾನಸಿಕ ಆಘಾತ ಉಂಟುಮಾಡಿದೆ. ಭಕ್ತರು ಭಕ್ತಿಭಾವದಿಂದ ಕಾಣಿಕೆ, ಹಣ ಹಾಗೂ ಬೆಳ್ಳಿ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಸಮರ್ಪಿಸುತ್ತಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

24 ಗಂಟೆಯೂ ನಿಗಾ

‘ರಾಜ್ಯದ ಎಲ್ಲ ಪ್ರಮುಖ ಮುಜರಾಯಿ ದೇವಾಲಯಗಳಲ್ಲಿ ಗರ್ಭಗುಡಿ ಸಮೀಪ, ಕಾಣಿಕೆ ಪೆಟ್ಟಿಗೆಗಳ ಬಳಿ, ಕಾಣಿಕೆ ತೆರೆಯುವ ಸ್ಥಳ, ಹಣ ಎಣಿಕೆ ಕೊಠಡಿ ಹಾಗೂ ಹಣ ಸಂಗ್ರಹಿಸುವ ಎಲ್ಲ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ. ಈ ಕ್ಯಾಮೆರಾಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಸಂಬಂಧಪಟ್ಟ ಪೊಲೀಸ್ ಠಾಣೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ವ್ಯವಸ್ಥೆಗೆ ನೇರವಾಗಿ ಸಂಪರ್ಕಿಸಲಾಗುವುದು. ಟ್ರಾಫಿಕ್ ನಿಯಂತ್ರಣ ಕೊಠಡಿಯ ಮಾದರಿಯಲ್ಲೇ ದೇವಾಲಯಗಳ ಮೇಲ್ವಿಚಾರಣೆಗೆ ಡ್ಯಾಶ್‌ಬೋರ್ಡ್ ವ್ಯವಸ್ಥೆ ರೂಪಿಸಲಾಗುವುದು. ಕಾಣಿಕೆ ಪೆಟ್ಟಿಗೆ ತೆರೆಯುವಾಗ, ಹಣ ಎಣಿಸುವಾಗ, ಹಣ ಸಂಗ್ರಹಿಸುವಾಗ ಹಾಗೂ ಮುಚ್ಚುವ ಪ್ರಕ್ರಿಯೆ ಸೇರಿದಂತೆ ಎಲ್ಲ ಹಂತಗಳ ಮೇಲೆ 24 ಗಂಟೆಯೂ ನಿಗಾ ಇರಲಿದೆ’ ಎಂದು ತಿಳಿಸಿದರು.

Moon quarantine center ಕೊರೋನಾ ತಂದ ಜಾಗತಿಕ ಭೀತಿ: ವೈರಸ್ ತಡೆಗೆ ಚಂದ್ರನಲ್ಲೇ ಕ್ವಾರಂಟೈನ್ ಕೇಂದ್ರ!

Covid tension ಮತ್ತೆ ಬಂತಾ ಕೊರೋನಾ? ಆಂಧ್ರದಲ್ಲಿ ಇಬ್ಬರ ಸಾವು, ನಾಲ್ವರಿಗೆ ಸೋಂಕು, ಜನರಲ್ಲಿ ಆತಂಕ

Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ

TAGGED:CCTV surveillance of all Mujarai shrines in the state: CM DK
Share This Article
Facebook Twitter Copy Link Print
Previous Article Covid tension ಮತ್ತೆ ಬಂತಾ ಕೊರೋನಾ? ಆಂಧ್ರದಲ್ಲಿ ಇಬ್ಬರ ಸಾವು, ನಾಲ್ವರಿಗೆ ಸೋಂಕು, ಜನರಲ್ಲಿ ಆತಂಕ

Popular Posts

Ayodhya scam effect ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಹುಂಡಿಗೆ ಸಿಸಿಟಿವಿ ಕಣ್ಗಾವಲು: ಸಿಎಂ ಡಿಕೆ

1 Min Read

Covid tension ಮತ್ತೆ ಬಂತಾ ಕೊರೋನಾ? ಆಂಧ್ರದಲ್ಲಿ ಇಬ್ಬರ ಸಾವು, ನಾಲ್ವರಿಗೆ ಸೋಂಕು, ಜನರಲ್ಲಿ ಆತಂಕ

2 Min Read

School van fell ಕಂದಕಕ್ಕೆ ಉರುಳಿದ ಶಾಲಾ ಬಸ್, 7 ವಿದ್ಯಾರ್ಥಿಗಳಿಗೆ ಗಾಯ!

1 Min Read

Moon quarantine center ಕೊರೋನಾ ತಂದ ಜಾಗತಿಕ ಭೀತಿ: ವೈರಸ್ ತಡೆಗೆ ಚಂದ್ರನಲ್ಲೇ ಕ್ವಾರಂಟೈನ್ ಕೇಂದ್ರ!

2 Min Read

You Might Also Like

ದೇಶಪ್ರಮುಖ

Terrible encounter ಭೀಕರ ಎನ್‌ಕೌಂಟರ್‌ಗೆ ನಾಲ್ವರು ಶೂಟರ್ಸ್‌ ಬಲಿ, 3 ಪೊಲೀಸರಿಗೆ ಗಾಯ, 60 ಬಾರಿ ಗುಂಡು!

2 Min Read
ಪ್ರಮುಖಕರ್ನಾಟಕ

Court Order ಗಾಂಜಾ ಸೇವಿಸಿದ ಯುವಕನಿಂದಲೇ ಶಾಲೆಯಲ್ಲಿ ಜಾಗೃತಿ ಪಾಠ! ಗಮನ ಸೆಳೆದ ಕೋರ್ಟ್ ಆದೇಶ

1 Min Read
ಪ್ರಮುಖವಿದೇಶವೈರಲ್

Khameneis funeral ಖಮೇನಿ ಅಂತ್ಯಕ್ರಿಯೆಯಲ್ಲಿ ಇರಾನ್‌ ಅಧ್ಯಕ್ಷ ಪೆಜೆಶ್ಕಿಯನ್, ವಿದೇಶಾಂಗ ಸಚಿವನ ಮೇಲೆ ಹಲ್ಲೆ ಯತ್ನ? ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 10-07-2026 ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?