newsics.com | ನ್ಯೂಸಿಕ್ಸ್
ಮಂಗಳೂರು: ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗೆ ಧಕ್ಕೆ ತರುವಂತಹ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಚಲಿಸುವ ಮಂಗಳೂರು: ಖಾಸಗಿ ಬಸ್‌ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದಲ್ಲದೆ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತಿ ಮೆರೆದಿದ್ದ ಖಾಸಗಿ ಬಸ್ ಕಂಡಕ್ಟರ್‌ನನ್ನು ದಕ್ಷಿಣ (ಪಾಂಡೇಶ್ವರ) ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 9, 2026ರ ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಬಸ್ ಎಂದಿನಂತೆ ಮಂಗಳೂರು-ವಿಟ್ಲ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಈ ಆಘಾತಕಾರಿ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ನೋಡಿ ವಿಕೃತ ಬುದ್ಧಿ ಪ್ರದರ್ಶಿಸಿದ ಕಂಡಕ್ಟರ್ ಇರ್ಫಾನ್, ವಿದ್ಯಾರ್ಥಿನಿಯರ ಮುಂಭಾಗವೇ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ, ಅತ್ಯಂತ ಅಸಭ್ಯವಾಗಿ ಸನ್ನೆಗಳನ್ನು ಮಾಡಿದ್ದಾನೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿನಿಯರನ್ನು ಬಸ್‌ನ ಹಿಂದಿನ ಸೀಟಿಗೆ ಬರುವಂತೆ ಸನ್ನೆ ಮಾಡಿ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಸ್ ಕಂಡಕ್ಟರ್‌ನ ಈ ಹಠಾತ್ ಹಾಗೂ ವಿಕೃತ ವರ್ತನೆಯಿಂದ ತೀವ್ರ ಆಘಾತಕ್ಕೊಳಗಾದ ಕಾಲೇಜು ವಿದ್ಯಾರ್ಥಿನಿಯರು ಧೈರ್ಯಗೆಡದೆ, ಘಟನೆ ಸಂಭವಿಸಿದ ತಕ್ಷಣವೇ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿನಿಯರು ನೀಡಿದ ಲಿಖಿತ ದೂರಿನ ಅನ್ವಯ ಪೊಲೀಸರು ಆರೋಪಿ ಇರ್ಫಾನ್ ವಿರುದ್ಧ ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾರ್ವಜನಿಕ ಸಾರಿಗೆಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಜುಲೈ 10, 2026ರ ಶುಕ್ರವಾರದಂದು ಆರೋಪಿ ಇರ್ಫಾನ್ ಅಡಗಿದ್ದ ಸ್ಥಳದ ಮೇಲೆ ದಾಳಿ ನಡೆಸಿ ಆತನನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
Menstrual Leave ಆರೋಗ್ಯ ಇಲಾಖೆ ಮಹಿಳೆಯರಿಗೆ ಗುಡ್ ನ್ಯೂಸ್: ಸಿಗಲಿದೆ ವರ್ಷಕ್ಕೆ 12 ದಿನ ವೇತನಸಹಿತ ಋತುಚಕ್ರದ ರಜೆ