newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಹೀಗಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನು, ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಹವ್ಯಾಸಿ ತಾಣ ಕೊಡಗಿನ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.