Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ
ಕರ್ನಾಟಕದೇಶಪ್ರಮುಖಮನರಂಜನೆ

S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ

Share
2 Min Read
SHARE

newsics.com | ನ್ಯೂಸಿಕ್ಸ್

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್. ಜಾನಕಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಅವರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ, 1957ರಿಂದಲೂ ಚಿತ್ರಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ.

ಹಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 20ಕ್ಕೂ ಹೆಚ್ಚು ಭಾಷೆಗಳಲ್ಲಿ ಎಸ್ ಜಾನಕಿ ಹಾಡಿದ್ದಾರೆ.

20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ವರ್ಷ ಜನವರಿಯಲ್ಲಿ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ ಹೊಂದಿದ್ದರು. ಆ ಬಳಿಕ ಪುತ್ರ ಶೋಕ ಅತಿಯಾಗಿ ಕಾಡಿತ್ತು. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾನಕಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಅವರು ಆಂಧ್ರದವರಾದರೂ ಹೆಚ್ಚು ಪ್ರಸಿದ್ಧಿ ಪಡೆದು ಕನ್ನಡಿಗರ ಮನೆಮನಗಳಿಗೆ ಹತ್ತಿರವಾದದ್ದು ಕನ್ನಡ ಹಾಡುಗಳ ಮೂಲಕ. ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಉಚ್ಚರಿಸುತ್ತಾ, ಇಲ್ಲಿನದ್ದೇ ಧ್ವನಿ ಎನ್ನುವಂತೆ ಅವರು ಸಾವಿರಾರು ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಜಾನಕಿ ಅಮ್ಮನ ಸಾಧನೆ:
70-80ರ ದಶಕದಲ್ಲಿ ಜಾನಕಿ ಅವರು ಸಾಕಷ್ಟು ಹಾಡುಗಳನ್ನು ಹಾಡಿದರು. ಅವರಷ್ಟು ಜನಪ್ರಿಯತೆ ಪಡೆದ ಮತ್ತೊಬ್ಬರು ಕನ್ನಡದಲ್ಲಿ ಇರಲಿಲ್ಲ. ವರನಟ ಡಾ. ರಾಜ್‌ಕುಮಾರ್ ಹಾಗೂ ಎಸ್. ಜಾನಕಿ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದ ಗೋಲ್ಡನ್ ಎರಾ. ‘ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ’ ಮುಂತಾದ ನೂರಾರು ಸದಾಹಸಿರು ಯುಗಳ ಗೀತೆಗಳನ್ನು ಇವರು ನೀಡಿದ್ದಾರೆ.
ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಧ್ವನಿಯಲ್ಲಿ ಮೂಡಿಬಂದ ರೋಮ್ಯಾಂಟಿಕ್ ಹಾಡುಗಳು ಇಂದಿಗೂ ಯುವಕರ ನೆಚ್ಚಿನ ಹಾಡುಗಳಾಗಿವೆ.

ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಇರುವ ಅತಿ ದೊಡ್ಡ ವಿಶೇಷ ಶಕ್ತಿಯೆಂದರೆ ಅದು ಧ್ವನಿ ಬದಲಾವಣೆ . ಸಣ್ಣ ಮಗುವಿನ ಧ್ವನಿಯಿಂದ ಹಿಡಿದು ಪ್ರೌಢ ಮಹಿಳೆಯ ಧ್ವನಿಯವರೆಗೆ, ಕೇವಲ ಗಾಯನದ ಮೂಲಕವೇ ನಟನೆಯ ಭಾವನೆಗಳನ್ನು ತರುತ್ತಿದ್ದ ಅದ್ಭುತ ಗಾಯಕಿ ಇವರು. ಕನ್ನಡ ಚಿತ್ರರಂಗದಲ್ಲಿ ಅವರು ಹಾಡಿದ ಸದಾಹಸಿರು ಗೀತೆಗಳಿಗೆ ಕರ್ನಾಟಕ ಸರ್ಕಾರವು ಹಲವು ಬಾರಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

 

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

TAGGED:#sjanaki #singer #playbacksinger #mysore #news #newsics
Share This Article
Facebook Twitter Copy Link Print
Previous Article Minor girl ra*pe & mur*der ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ*ಚಾರ, ಕೊ*ಲೆ: ಮಾಲ್ ಬೇಸ್‌ಮೆಂಟ್‌ನಲ್ಲಿ ಶವ ಪತ್ತೆ

Popular Posts

S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ

2 Min Read

Minor girl ra*pe & mur*der ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ*ಚಾರ, ಕೊ*ಲೆ: ಮಾಲ್ ಬೇಸ್‌ಮೆಂಟ್‌ನಲ್ಲಿ ಶವ ಪತ್ತೆ

2 Min Read

Coffee date after divorce ವಿಚ್ಛೇದನದ ಬೆನ್ನಲ್ಲೇ ಕಾಫಿ ಡೇಟ್, ಕೋರ್ಟ್ ಆವರಣದಲ್ಲೇ ರೀಲ್ಸ್: ಶಿವಮೊಗ್ಗ ದಂಪತಿಯ ವಿಲಕ್ಷಣ ನಡೆ ವೈರಲ್!

1 Min Read

Misbehave with female students ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ ಕಂಡಕ್ಟರ್ ಬಂಧನ

2 Min Read

You Might Also Like

ಕರ್ನಾಟಕದೇಶಪ್ರಮುಖಲೈಫ್‌ಸ್ಟೈಲ್

WhatsApp popularity ಈಗ ಎಲ್ಲವೂ ವಾಟ್ಸಾಪ್‌ನಲ್ಲೇ ಸಿಗುತ್ತೆ! ಹಾಯ್ ಅಂದ್ರೆ ಸಾಕು

2 Min Read
ದೇಶಪ್ರಮುಖ

Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

1 Min Read
ಕರ್ನಾಟಕಪ್ರಮುಖ

Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?

1 Min Read
ಪ್ರಮುಖಲೈಫ್‌ಸ್ಟೈಲ್

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?