newsics.com | ನ್ಯೂಸಿಕ್ಸ್
ಬೆಂಗಳೂರು: ಇನ್ನು ಮುಂದೆ ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದಾಗಿರುತ್ತದೆ. ಈ ಆರತಿಯನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೆ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದರು.
ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ಕರ್ನಾಟಕ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿದಂತೆ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರದ ಪರವಾಗಿ ಯಾರೇ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆʼ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಎಷ್ಟೋ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದೇವರ ದರ್ಶನ ಸಿಗದೆ ವಾಪಸ್ ಬಂದಿದ್ದಾರೆ. ಇನ್ನು ಮುಂದೆ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ಅವಕಾಶ ಒದಗಿಸಲಾಗಿದೆ. ಇದು ನನ್ನ ಕಾಲದಲ್ಲಿ ಆಗಲಿರುವ ಮುಖ್ಯ ಘೋಷಣೆʼ ಎಂದು ಹೇಳಿದ್ದಾರೆ.
Viral news ಒಂದೇ ಒಂದು ಪಾನಿಪುರಿ, 9 ಆರೋಪಿಗಳು, 12 ವರ್ಷಗಳ ಕೇಸ್! ಕೊನೆಗೂ ಸಿಕ್ತು ಕ್ಲೈಮ್ಯಾಕ್ಸ್ ಟ್ವಿಸ್ಟ್!