newsics.com | ನ್ಯೂಸಿಕ್ಸ್
ದಾವಣಗೆರೆ: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ಈ ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂಬ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಇದರಿಂದಾಗಿ ವಚನಾನಂದ ಸ್ವಾಮೀಜಿ ಅವರಿಗೆ ಸದ್ಯ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಂತಾಗಿದೆ.
Road Mishap ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರು ಸಾ*ವು