Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Killer Doctor ಡಾಕ್ಟರ್ ಪತಿಯನ್ನು ಕೊಂ*ದು ಮಗನ ಮೇಲೆ ಹಲ್ಲೆ ನಡೆಸಿದ ವೈದ್ಯೆ, ರಕ್ತದೋಕುಳಿಯಲ್ಲಿ ರೀಲ್ಸ್ ನೋಡ್ತಿದ್ದ ಹಂತಕಿ!
ಕರ್ನಾಟಕಪ್ರಮುಖ

Killer Doctor ಡಾಕ್ಟರ್ ಪತಿಯನ್ನು ಕೊಂ*ದು ಮಗನ ಮೇಲೆ ಹಲ್ಲೆ ನಡೆಸಿದ ವೈದ್ಯೆ, ರಕ್ತದೋಕುಳಿಯಲ್ಲಿ ರೀಲ್ಸ್ ನೋಡ್ತಿದ್ದ ಹಂತಕಿ!

Share
2 Min Read
SHARE

newsics.com | ನ್ಯೂಸಿಕ್ಸ್

ಧಾರವಾಡ: ಇಲ್ಲಿನ ವೈದ್ಯೆಯೊಬ್ಬರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ವೈದ್ಯ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಎಂಟು ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ಆಯುಕ್ತರು ಉಸಿರಾಡುತ್ತಿದ್ದ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿದ್ಯಾಕಾಶಿ ಧಾರವಾಡದಲ್ಲಿ ನಾಗರಿಕರು ಅಕ್ಷರಶಃ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಸಂಸಾರ ಅಂದಮೇಲೆ ಸಣ್ಣಪುಟ್ಟ ಜಗಳಗಳು ಸಹಜ, ಆದರೆ ಇಲ್ಲಿ ಪತ್ನಿಯೇ ರಾಕ್ಷಸಿಯಾಗಿ ಬದಲಾಗಿದ್ದಾಳೆ. ವೃತ್ತಿಯಲ್ಲಿ ವೈದ್ಯರಾಗಿರುವ ಪತಿಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ ಪತ್ನಿ, ಹತ್ತು ವರ್ಷದ ಪುಟ್ಟ ಮಗನ ಮೇಲೂ ಪ್ರಾಣಾಂತಿಕ ದಾಳಿ ನಡೆಸಿದ್ದಾಳೆ.

ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಹೈಡ್ರಾಮಾ:

ಧಾರವಾಡದ ಕೆವಿವಿ ರಸ್ತೆಯಲ್ಲಿರುವ ಬಾರಾಕೊಟ್ರಿ ಬಡಾವಣೆಯ ‘ರಂಕಾ ಕೆಸ್ಟೆಲ್ಲೋ’ ಅಪಾರ್ಟ್‌ಮೆಂಟ್‌ನಲ್ಲಿ ಈ ಭೀಕರ ಘಟನೆ ನಡೆದಿದೆ. ಚಿರಾಯು ಆಸ್ಪತ್ರೆಯ ವೈದ್ಯರಾಗಿದ್ದ ಡಾ. ಕಿರಣ್ ಹೊನ್ನಣ್ಣವರ್ (45) ಹತ್ಯೆಯಾದ ದುರ್ದೈವಿ. ಇವರ ಪತ್ನಿ ಪ್ರಿಯಾಂಕಾ ಕೂಡ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಏನೋ ಕಿರಿಕಿರಿ ಅಥವಾ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಾಂಕಾ ತನ್ನ ಪತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾಳೆ.

ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಈಕೆಯ ಕ್ರೌರ್ಯ ಅಲ್ಲಿಗೆ ನಿಲ್ಲಲಿಲ್ಲ. ಮತ್ತೊಂದು ಕೋಣೆಯಲ್ಲಿದ್ದ ಎಂಟು ವರ್ಷದ ಮಗ ನೇಹಿತ್ ಮೇಲೂ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಅತ್ಯಂತ ನಿರ್ಲಜ್ಜವಾಗಿ ತನ್ನ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎಂದು ತಿಳಿದುಬಂದಿದೆ.

ಅಪಾರ್ಟ್‌ಮೆಂಟ್‌ನಲ್ಲಿದ್ದ ನೆರೆಹೊರೆ ಹಾಗೂ ಇತರರು ಪೊಲೀಸರಿಗೆ ಕೊಲೆಯಾದ ಘಟನೆ ಬಗ್ಗೆ ಮಾಹಿತಿ ನೀಡಿದರೂ, ಮಗುವನ್ನು ಉಳಿಸುವ ಪ್ರಯತ್ನ ಮಾಡಿಲ್ಲ. ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾಗ, ಮಗು ನೇಹಿತ್ ಇನ್ನು ಉಸಿರಾಡುತ್ತಿರುವುದನ್ನು ಗಮನಿಸಿದರು. ತಕ್ಷಣವೇ ತಡಮಾಡದೆ ಮಗುವನ್ನು ತಮ್ಮ ಕೈಯಲ್ಲೇ ಹೊತ್ತುಕೊಂಡು ಕೆಳಗೆ ತಂದು ಆಸ್ಪತ್ರೆಗೆ ರವಾನಿಸಿದ್ದಾರೆ.

ನೆರೆಹೊರೆಯವರೂ ಕೂಡ ವೈದ್ಯರು ಇದ್ದೀರಿ. ಒಂದು ಮಗುವನ್ನು ಉಳಿಸುವ ಸಣ್ಣ ಪ್ರಯತ್ನವನ್ನಾದರೂ ಮಾಡಬಾರದೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಮಗು ಸಾವು ಬದುಕಿನ ಮಧ್ಯೆ ಖಾಸಗಿ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಹೋದರಿಯರ ಆಕ್ರಂದನ, ಪತ್ನಿ ವಶಕ್ಕೆ:

ಘಟನಾ ಸ್ಥಳಕ್ಕೆ ಡಾ. ಕಿರಣ್ ಅವರ ಸಹೋದರಿಯರು ಧಾವಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾಗಿರಿ ಮತ್ತು ಉಪನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪತ್ನಿ ಪ್ರಿಯಾಂಕಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸುಸಂಸ್ಕೃತ ಕುಟುಂಬದಲ್ಲಿ ನಡೆದ ಈ ರಕ್ತಸಿಕ್ತ ಅಧ್ಯಾಯ ಇಡೀ ಧಾರವಾಡವನ್ನು ಸ್ತಬ್ಧಗೊಳಿಸಿದೆ.

 

Instamart LPG ಇನ್ಮುಂದೆ ಇನ್‌ಸ್ಟಾಮಾರ್ಟ್‌ನಲ್ಲೂ ಸಿಗುತ್ತೆ LPG ಸಿಲಿಂಡರ್!

Tragedy ಮಕ್ಕಳಿಗೆ ತಿಂಡಿ ಕೊಡುವಾಗ ಇರಲಿ ಎಚ್ಚರ: ಗಂಟಲಿನಲ್ಲಿ ಶೇಂಗಾ ಬೀಜ ಸಿಲುಕಿ 3 ವರ್ಷದ ಕಂದಮ್ಮ ಸಾ*ವು

Electrical Safety Tips ಮಳೆಗಾಲದಲ್ಲಿ ಕರೆಂಟ್ ಶಾಕ್ ಹೊಡೆಯುವ ಭಯವೇ? ಹಾಗಿದ್ದರೆ ತಕ್ಷಣ ಈ ಸುರಕ್ಷತಾ ಕ್ರಮಗಳನ್ನು ಪಾಲಿಸಿ

TAGGED:The doctor who killed the doctor's husband and attacked the son
Share This Article
Facebook Twitter Copy Link Print
Previous Article Instamart LPG ಇನ್ಮುಂದೆ ಇನ್‌ಸ್ಟಾಮಾರ್ಟ್‌ನಲ್ಲೂ ಸಿಗುತ್ತೆ LPG ಸಿಲಿಂಡರ್!
Next Article Yoga Tips: ಯೋಗ ಮಾಡುವ ಮುನ್ನ ಈ ನಿಯಮಗಳು ನೆನಪಿರಲಿ

Popular Posts

Hydrogen Train ನಾಳೆ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ; ಏನಿದರ ವಿಶೇಷತೆ? ಇಲ್ಲಿದೆ ವಿವರ

1 Min Read

Good News ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ: ಮನೆ ಯಜಮಾನಿಯರ ಖಾತೆಗೆ ₹2,000 ಜಮೆ

1 Min Read

Cancer Facts ಗ್ಯಾಸ್ ಉರಿ ಮೇಲೆ ಚಪಾತಿ ಸುಟ್ಟರೆ ಕ್ಯಾನ್ಸರ್ ಬರುತ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

2 Min Read

Health Tips ಟೀ-ಕಾಫಿಗೆ ಸಕ್ಕರೆ ಹಾಕೋ ಮುನ್ನ ಯೋಚಿಸಿ; ಕೇವಲ ಎರಡು ವಾರ ಸಿಹಿ ತ್ಯಜಿಸಿದರೆ ಬದಲಾಗುತ್ತೆ ನಿಮ್ಮ ಆರೋಗ್ಯ

2 Min Read

You Might Also Like

ಪ್ರಮುಖದೇಶ

ISRO ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಕಠಿಣ ಬ್ರೇಕ್; ಹೊಸ ನಿಯಮ ಜಾರಿ

1 Min Read
ಪ್ರಮುಖವಿದೇಶವೈರಲ್

Viral News ‘ನಾವು ಡೊನಾಲ್ಡ್ ಟ್ರಂಪ್‌ನನ್ನು ಕೊಲ್ಲುತ್ತೇವೆ’: ಇರಾನ್‌ನಲ್ಲಿ ಟ್ರಂಪ್‌ ಶವಪೆಟ್ಟಿಗೆಯ ಪೋಸ್ಟರ್ ಪ್ರತ್ಯಕ್ಷ

1 Min Read
ಪ್ರಮುಖದೇಶ

Puri Jaganath ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲು; 33 ಭಕ್ತರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖಕರ್ನಾಟಕ

Rain ರಾಜಧಾನಿಯಲ್ಲಿ ದಿಢೀರ್ ವರ್ಷಧಾರೆ; ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?