newsics.com | ನ್ಯೂಸಿಕ್ಸ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಜೋರು ಮಳೆ ಆರಂಭವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದ ಮಲ್ಲೇಶ್ವರ, ಶೇಷಾದ್ರಿಪುರ, ಸದಾಶಿವನಗರ, ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆ.ಆರ್. ಸರ್ಕಲ್, ಶ್ರೀರಾಮಪುರ, ಗಾಂಧಿನಗರ, ವಿಜಯನಗರ, ಹೊಸಹಳ್ಳಿ, ಮಂಜುನಾಥ ನಗರ, ಶಿವಳ್ಳಿ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ದಟ್ಟ ಮೋಡ ಕವಿದ ವಾತಾವರಣ
ನಗರದ ಇನ್ನು ಕೆಲವು ಪ್ರದೇಶಗಳಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಮಳೆರಾಯನ ಅಬ್ಬರ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಕಾಲ ನಗರದಾದ್ಯಂತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯ.
Landslide Alert ಭೂಕುಸಿತ ಭೀತಿ; ಮನೆ ಖಾಲಿ ಮಾಡಲು ನಿರಾಕರಿಸಿದ ನಿವಾಸಿಗಳು, ಬದಲಿ ಜಾಗಕ್ಕೆ ಪಟ್ಟು