newsics.com | ನ್ಯೂಸಿಕ್ಸ್
ಬೆಂಗಳೂರು: ನಿಯಂತ್ರಣ ತಪ್ಪಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್
ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ಕೆ.ಆರ್. ವೃತ್ತದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಮೊದಲು ಜೋರಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬಸ್ ಅಷ್ಟಕ್ಕೇ ನಿಲ್ಲದೆ, ರಸ್ತೆ ಪಕ್ಕದ ಫುಟ್‌ಪಾತ್ ಮೇಲೆ ಹತ್ತಿ ಅಲ್ಲಿದ್ದ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಸ್ಥಳದಲ್ಲೇ ಪಾದಚಾರಿ ಸಾವು
ಬಸ್ ಡಿಕ್ಕಿ ಹೊಡೆದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಸದ್ಯ ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ತನಿಖೆ ಮುಂದುವರಿದಿದೆ.
Crime Case ಭೀಕರ ಕೃತ್ಯ: ಮಹಿಳೆಯನ್ನು ಕೊಂದ ಬಳಿಕ ಶವದ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ ಬಂಧನ