Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

Share
2 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟ ಅರ್ಜುನ್ ಬಿಜ್ಲಾನಿ, ನಟಿ ಮೌನಿ ರಾಯ್ ಜೊತೆಗಿನ ತಮ್ಮ ಸಂಬಂಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಖಡಕ್ ಆಗಿ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಕೇವಲ ಲೈಕ್ಸ್ ಮತ್ತು ವೀವ್ಸ್‌ಗಾಗಿ ಸುಳ್ಳು ಸುದ್ದಿ ಹಬ್ಬಿಸುವ ಗಾಸಿಪ್ ಪೇಜ್‌ಗಳು ಹಾಗೂ ಟ್ರೋಲರ್‌ಗಳ ವಿರುದ್ಧ ಅವರು ತೀವ್ರ ಬೇಸರ ಹೊರಹಾಕಿದ್ದಾರೆ.

 

 

ವದಂತಿಗಳ ಹಿನ್ನೆಲೆ ಏನು?

‘ನಾಗಿನ್’ ಧಾರಾವಾಹಿಯ ಮೊದಲ ಸೀಸನ್‌ನಲ್ಲಿ ಜೋಡಿಯಾಗಿ ನಟಿಸಿದ್ದ ಮೌನಿ ರಾಯ್ ಮತ್ತು ಅರ್ಜುನ್ ಬಿಜ್ಲಾನಿ ಕಳೆದ 15 ವರ್ಷಗಳಿಂದ ಆಪ್ತ ಸ್ನೇಹಿತರು. ಇತ್ತೀಚೆಗಷ್ಟೇ ಮೌನಿ ರಾಯ್ ತಮ್ಮ ಪತಿ ಸೂರಜ್ ನಂಬಿಯಾರ್ ಅವರಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಕೆಲವು ಸೋಶಿಯಲ್ ಮೀಡಿಯಾ ಪೇಜ್‌ಗಳು ಅರ್ಜುನ್ ಮತ್ತು ಮೌನಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುಳ್ಳು ಕಥೆಗಳನ್ನು ಸೃಷ್ಟಿಸಿ ಹರಿಬಿಟ್ಟಿದ್ದವು.

ಸತತವಾಗಿ ವೈರಲ್ ಆಗುತ್ತಿದ್ದ ಗಾಸಿಪ್‌ಗಳಿಗೆ ಸುದೀರ್ಘ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಅರ್ಜುನ್, “15 ವರ್ಷಗಳ ಹಳೆಯ ಸ್ನೇಹಕ್ಕೆ ಯಾವುದೋ ವೆಬ್‌ಸೈಟ್‌ನ ಹೆಡ್‌ಲೈನ್‌ಗಾಗಿ ಪ್ರೀತಿಯ ಬಣ್ಣ ಬಳಿಯಬೇಡಿ. ಕಷ್ಟದ ಸಮಯದಲ್ಲಿ ಸ್ನೇಹಿತರು ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುತ್ತಾರೆ ಅಷ್ಟೇ. ಪ್ರತಿ ಬಾರಿ ಒಬ್ಬ ಗಂಡು ಮತ್ತು ಹೆಣ್ಣು ಒಟ್ಟಿಗೆ ಕಂಡ ತಕ್ಷಣ ಅದಕ್ಕೆ ಅಫೇರ್ ಪಟ್ಟ ಕಟ್ಟುವುದು ತಪ್ಪು” ಎಂದು ಕಿಡಿಕಾರಿದ್ದಾರೆ. ಯಾವುದೇ ಸುದ್ದಿ ಹಾಕುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಿ, ಜನರ ವೈಯಕ್ತಿಕ ಜೀವನದ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಅರ್ಜುನ್ ಬಿಜ್ಲಾನಿ ಅವರ ಈ ಪೋಸ್ಟ್‌ಗೆ ಕಿರುತೆರೆಯ ಮತ್ತೊಬ್ಬ ಜನಪ್ರಿಯ ನಟಿ ಕ್ರಿಸ್ಟಲ್ ಡಿಸೋಜಾ ಸೇರಿದಂತೆ ಹಲವು ತಾರೆಯರು ಹಾಗೂ ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ. “ಕೇವಲ ವೀವ್ಸ್‌ಗಾಗಿ ಇಂತಹ ಅಸಂಬದ್ಧ ಸುದ್ದಿಗಳನ್ನು ಹರಡುವುದು ಸರಿಯಲ್ಲ” ಎಂದು ಟ್ರೋಲರ್‌ಗಳ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಹಾಕಿದ್ದ ಮೌನಿ

ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ತಾವಿಬ್ಬರೂ ಪರಸ್ಪರ ಒಪ್ಪಿಗೆಯಿಂದ ನಾಲ್ಕು ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಮೇ ತಿಂಗಳಿನಲ್ಲಿ ಜಂಟಿ ಹೇಳಿಕೆ ಮೂಲಕ ಪ್ರಕಟಿಸಿದ್ದರು. ಈ ಕಷ್ಟದ ಸಮಯದಲ್ಲಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅವರು ಮನವಿ ಮಾಡಿದ್ದರು.

 

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

TAGGED:#Arjun Bijlani #Mouni Roy #Divorce #news #newsics
Share This Article
Facebook Twitter Copy Link Print
Previous Article Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್
Next Article KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

Popular Posts

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

You Might Also Like

ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?