newsics.com | ನ್ಯೂಸಿಕ್ಸ್
ಗುವಾಹಟಿ: ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಮೋನ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಧಾರಾಕಾರ ಮಳೆಯ ಕಾರಣದಿಂದಾಗಿ ಮೋನ್ ಜಿಲ್ಲೆಯ ಹಲವೆಡೆ ದಿಢೀರ್ ಪ್ರವಾಹ ಉಂಟಾಗಿದ್ದು, ಭೂಕುಸಿತದ ತೀವ್ರತೆಗೆ ಹಲವಾರು ಮನೆಗಳು ಮಣ್ಣಿನ ಪಾಲಾಗಿವೆ. ಸದ್ಯ ಮಣ್ಣಿನ ಅವಶೇಷಗಳ ಅಡಿಯಲ್ಲಿ ಹಲವು ಜನರು ಸಿಲುಕಿಕೊಂಡಿರುವ ಆತಂಕ ಎದುರಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಆದರೆ, ದುರಂತ ಸಂಭವಿಸಿದ ಸ್ಥಳಕ್ಕೆ ಭಾರಿ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗುತ್ತಿರುವುದರಿಂದ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯುಂಟಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ