Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

Share
2 Min Read
SHARE

newsics.com| ನ್ಯೂಸಿಕ್ಸ್

ನ್ಯೂಜೆರ್ಸಿ: ನಗರದ ಮೆಟ್‌ಲೈಫ್ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ‘ಹಾಲಿ ಚಾಂಪಿಯನ್’ ಅರ್ಜೆಂಟೀನಾ ವಿರುದ್ಧ ಸ್ಪೇನ್ ಭರ್ಜರಿ ಗೆಲುವು ಸಾಧಿಸಿದೆ.

ಹೆಚ್ಚುವರಿ ಸಮಯದ ದ್ವಿತೀಯಾರ್ಧದಲ್ಲಿ ಫೆರಾನ್ ಟೊರೆಸ್ ರಿಬೌಂಡ್ ಮೂಲಕ ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸುವಲ್ಲಿ ಯಶಸ್ವಿಯಾದರು.

ಇದರೊಂದಿಗೆ ಸ್ಪೇನ್ 1-0ರಿಂದ ಲಯೊನೆಲ್ ಮೆಸ್ಸಿ ಪಡೆಯನ್ನು ಸೋಲಿಸಿತು. ಅಲ್ಲದೆ, ಯುರೋಪಿಯನ್ ಚಾಂಪಿಯನ್ ಆಗಿರುವ ಸ್ಪೇನ್ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಅರ್ಜೆಂಟೀನಾದ ಎಂಜೊ ಫರ್ನಾಂಡೆಜ್ ಎರಡನೇ ಹಳದಿ ಕಾರ್ಡ್ ಪಡೆದು ಮೈದಾನದಿಂದ ಹೊರನಡೆದಾಗ ಮೆಸ್ಸಿ ಪಡೆ 10 ಆಟಗಾರರಿಗೆ ಸೀಮಿತವಾಗಿತ್ತು. ಅಲ್ಲದೆ, ಸ್ಪೇನ್ ಎದುರು ಆಕ್ರಮಣಕಾರಿಯಾಗಿ ಆಡುವಲ್ಲಿ ಸಂಪೂರ್ಣ ಎಡವಿತು.

65ನೇ ವಯಸ್ಸಿನಲ್ಲಿ ಸ್ಪೇನ್ ತಂಡದ ಲೂಯಿಸ್‌ ದೆಲಾ ಫ್ಯುಯಂತ್‌ ವಿಶ್ವಕಪ್ ಗೆದ್ದ ಅತ್ಯಂತ ಹಿರಿಯ ಕೋಚ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮೆಸ್ಸಿ ಮೂರು ವಿಶ್ವಕಪ್ ಫೈನಲ್‌ಗಳಲ್ಲಿ ಆಡಿದ ವಿಶ್ವದ ಎರಡನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಜೊತೆಗೆ ಫೈನಲ್ ಪಂದ್ಯವೊಂದರಲ್ಲಿ ಆಡಿದ ಅತ್ಯಂತ ಹಿರಿಯ ಔಟ್‌ಫೀಲ್ಡ್ ಆಟಗಾರ ಎನಿಸಿಕೊಂಡರು.

ಇಂಗ್ಲೆಂಡ್‌ಗೆ ಕಂಚು

ಇಂಗ್ಲೆಂಡ್ ಫುಟ್‌ಬಾಲ್ ತಂಡವು ಆರು ದಶಕಗಳ ನಂತರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಪದಕ ಗೆಲುವಿನ ಸಂಭ್ರಮ ಆಚರಿಸಿಕೊಂಡಿತು. ಮೂರನೇ ಸ್ಥಾನ ಗಳಿಸಿ ಕಂಚಿನ ಪದಕ ತನ್ನದಾಗಿಸಿಕೊಂಡಿತು.

ಶನಿವಾರ ತಡರಾತ್ರಿ ನಡೆದ ಪ್ಲೇ ಆಫ್‌ ಪಂದ್ಯದಲ್ಲಿ ಬುಕಾಯೊ ಸಕಾ ‘ಹ್ಯಾಟ್ರಿಕ್’ ಗೋಲುಗಳ ನೆರವಿನಿಂದ ಇಂಗ್ಲೆಂಡ್ ತಂಡವು 6-4ರಿಂದ ಫ್ರಾನ್ಸ್‌ ಎದುರು ಜಯಭೇರಿ ಬಾರಿಸಿತು. ಎರಡು ಗೋಲು ಗಳಿಸಿದ ಫ್ರಾನ್ಸ್ ತಾರೆ ಕೈಲಿಯನ್ ಎಂಬಾಪೆ ವಿಶ್ವಕಪ್ ಫುಟ್‌ಬಾಲ್‌ನಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರನಾದರು.

ಒಟ್ಟು 22 ಗೋಲು ಹೊಡೆದಿರುವ ಅವರು ಅರ್ಜೆಂಟೀನಾದ ಲಯೊನೆಲ್ ಮೆಸ್ಸಿ (21) ಅವರನ್ನು ಹಿಂದಿಕ್ಕಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ಅವರು 10 ಗೋಲುಗಳೊಂದಿಗೆ ‘ಚಿನ್ನದ ಬೂಟು’ ಪಡೆಯುವವರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ.

ಇಂಗ್ಲೆಂಡ್ ತಂಡವು 1966ರಲ್ಲಿ ಚಾಂಪಿಯನ್ ಆಗಿತ್ತು. ಅದರ ನಂತರ ಇದೇ ಮೊದಲ ಬಾರಿಗೆ ಪದಕ ಸಾಧನೆ ಮಾಡಿತು. ಸೆಮಿಫೈನಲ್‌ನಲ್ಲಿ ತಂಡವು ಅರ್ಜೆಂಟೀನಾ ಎದುರು ಸೋತಿತ್ತು.

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

TAGGED:#FIFAWorldCup2026 #Spain #Argentina #champions #sportsnews #kannadanews #news #newsics
Share This Article
Facebook Twitter Copy Link Print
Previous Article Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
Next Article Best Health Tips | ಪ್ರತಿದಿನ 30 ನಿಮಿಷ ನಡೆದರೆ ದೇಹದಲ್ಲಿ ಆಗುವ ಬದಲಾವಣೆಗಳು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?