Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ
ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

Share
2 Min Read
SHARE

newsics.com | ನ್ಯೂಸಿಕ್ಸ್

ಹೈದರಾಬಾದ್: ದೇಶದ ಅತ್ಯುನ್ನತ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡುವ ಹೈದರಾಬಾದ್‌ನ ಪ್ರತಿಷ್ಠಿತ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (SVPNPA) ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸಹ ತರಬೇತಿ ಅಧಿಕಾರಿಯಿಂದಲೇ ತಮಗೆ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಐಪಿಎಸ್ ಪ್ರೊಬೇಷನರಿ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ. ಜುಲೈ 18 ರಂದು ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ತರಬೇತಿ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ.

 

ಮೂಲಗಳ ಪ್ರಕಾರ, 30 ವರ್ಷದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸುಮಾ ಹೆಚ್.ಕೆ. ಅವರು ನೀಡಿರುವ ದೂರಿನ ಅನ್ವಯ, ಸಹ ತರಬೇತಿದಾರ ಉದಯ್ ಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಅತ್ತಾಪುರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಳೆದ ಜೂನ್ 23 ರಿಂದಲೇ ಉದಯ್ ಕೃಷ್ಣ ರೆಡ್ಡಿ ತಮಗೆ ನಿರಂತರವಾಗಿ ಕಾಟ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುವುದು ಮಾತ್ರವಲ್ಲದೆ, ಉಳಿದ ಪ್ರೊಬೇಷನರಿ ಅಧಿಕಾರಿಗಳ ಸಮ್ಮುಖದಲ್ಲೇ ಅವಹೇಳನಕಾರಿಯಾಗಿ ಮಾತನಾಡಿ ತೇಜೋವಧೆ ಮಾಡಿದ್ದಾನೆ. ಮತ್ತೊಬ್ಬ ಅಧಿಕಾರಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿ ಅದನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರಿದ್ದಾನೆ. ಇಷ್ಟೇ ಅಲ್ಲದೆ, ಬಲವಂತವಾಗಿ ಮೊಬೈಲ್ ಕಸಿದುಕೊಂಡು, ಪಾಸ್‌ವರ್ಡ್ ಹಾಕಿಸಿ ಆಕೆಯ ವೈಯಕ್ತಿಕ ಚಾಟ್‌ಗಳನ್ನು ನೋಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜುಲೈ 9 ರಂದು ಕಿರುಕುಳದ ತೀವ್ರತೆ ಮಿತಿಮೀರಿದೆ. ಆರೋಪಿಯು ಸುಮಾ ಅವರನ್ನು ಬಲವಂತವಾಗಿ ತನ್ನ ಕೋಣೆಗೆ ಎಳೆದುಕೊಂಡು ಹೋಗಿ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಜುಟ್ಟು ಹಿಡಿದು ಎಳೆದಾಡಿ, ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೆ, ಕುತ್ತಿಗೆಗೆ ಚಾಕು ಇಟ್ಟು ಬೆದರಿಸುತ್ತಾ ಆಕೆಯ ಮೈಮೇಲೆ ಕಾಂಡೋಮ್ ಪ್ಯಾಕೆಟ್‌ಗಳನ್ನು ಎಸೆದು ವಿಕೃತಿ ಮೆರೆದಿದ್ದಾನೆ. ಮರುದಿನವೂ ಸಹ ಆಕೆಯನ್ನು ಅಕ್ರಮವಾಗಿ ತಡೆದು ಅನುಚಿತವಾಗಿ ಸ್ಪರ್ಶಿಸಲು ಯತ್ನಿಸಿದ್ದಾನೆ ಎಂದು ಮಹಿಳಾ ಅಧಿಕಾರಿ ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ, ದೂರಿನಲ್ಲಿರುವ ಅತ್ಯಂತ ಗಂಭೀರವಾದ ಅಂಶವೆಂದರೆ, ಆರೋಪಿ ಉದಯ್ ಕೃಷ್ಣ ರೆಡ್ಡಿ ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯ ಖಾಸಗಿ ವಿಡಿಯೋವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ನಂತರ ಆ ವಿಡಿಯೋವನ್ನು ಸುಮಾ ಅವರ ಪತಿಗೆ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ್ದಾನೆ. ಜೊತೆಗೆ ಅಕಾಡೆಮಿಯಲ್ಲಿ ಇಲ್ಲಸಲ್ಲದ ಸುಳ್ಳು ವದಂತಿಗಳನ್ನು ಹರಡಿ ಗೌರವಕ್ಕೆ ಧಕ್ಕೆ ತಂದಿದ್ದಾನೆ ಎನ್ನಲಾಗಿದೆ. ಸದ್ಯ ಸಂತ್ರಸ್ತೆಯ ದೂರಿನ ಮೇರೆಗೆ ಅತ್ತಾಪುರ ಪೊಲೀಸರು ಆರೋಪಿ ಉದಯ್ ಕೃಷ್ಣ ರೆಡ್ಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಹಲ್ಲೆ, ಬೆನ್ನಟ್ಟುವುದು, ಜೀವ ಬೆದರಿಕೆ ಹಾಗೂ ಮಹಿಳೆಯ ಶೀಲಕ್ಕೆ ಧಕ್ಕೆ ತಂದಿರುವ ಗಂಭೀರ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

TAGGED:#Hyderabad #harassment #IPS officer #news #newsics
Share This Article
Facebook Twitter Copy Link Print
Previous Article Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ
Next Article Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?