Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಹಾಗೂ ಧರಣಿ ನಿರತ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿರೋಧಿಸಿ ವಿಪಕ್ಷ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಾರಥ್ಯದಲ್ಲಿ ಪ್ರಮುಖ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಬೃಹತ್ ಪ್ರತಿಭಟನೆ ನಡೆಸಿ, ಪೊಲೀಸರ ವಶವಾಗಿದ್ದಾರೆ.

 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ ಬಳಿಕ, ನಾಯಕರೆಲ್ಲರೂ ಒಟ್ಟಾಗಿ ಪ್ರಧಾನಿ ನಿವಾಸದ ಕಡೆಗೆ ನಡೆದರು. ಎಸ್‌ಪಿ ಅಧಿನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇರಳದ ವಿ.ಡಿ. ಸತೀಶನ್ ಮತ್ತು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಹಿರಿಯ ನಾಯಕರು ರಸ್ತೆಯಲ್ಲೇ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು.

ಇನ್ನು, ಪ್ರತಿಭಟನೆಯನ್ನು ತಕ್ಷಣವೇ ಹತ್ತಿಕ್ಕಲು ಬರುವ ಪೊಲೀಸರಿಂದ ರಕ್ಷಣೆ ಪಡೆಯಲು ವಿಪಕ್ಷ ನಾಯಕರು ವಿಭಿನ್ನ ತಂತ್ರ ಹೂಡಿದ್ದರು. ಪರಸ್ಪರ ಕೈಗಳನ್ನು ‘ಜಿಪ್-ಟೈ’ನಿಂದ ಬಂಧಿಸಿಕೊಂಡು ಜಂಟಿಯಾಗಿ ಧರಣಿ ಮುಂದುವರಿಸಿದರು. “ವಿದ್ಯಾರ್ಥಿಗಳ ಮೇಲಿನ ದಾಳಿಯು ಪ್ರತಿಯೊಂದು ಭಾರತೀಯ ಕುಟುಂಬದ ಮೇಲಿನ ದಾಳಿ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ದೇಶದ ಜನರ ಬೆಂಬಲ ಕೋರಿದರು.

ಸನ್ನಿವೇಶ ತಿಳಿಗೊಳಿಸಲು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ಗೃಹ ಕಾರ್ಯದರ್ಶಿ ಸ್ಥಳಕ್ಕೆ ಧಾವಿಸಿ ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಸಂಸತ್ತಿನಲ್ಲಿ ಚರ್ಚೆಗೆ ಒಪ್ಪಿಗೆ ನೀಡಿದರೂ, ವಿಪಕ್ಷಗಳು ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದವು. ಅಂತಿಮವಾಗಿ ಭದ್ರತಾ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, 2 ಗಂಟೆಗಳ ಕಾಲ ನಡೆದ ಪ್ರತಿಭಟನೆಯನ್ನು ಅಂತ್ಯಗೊಳಿಸಿ ನಾಯಕರನ್ನು ಬಂಧಿಸಿದರು.

 

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

TAGGED:#NEET Exam #Rahul Gandhi #PM Narendra Modi #news #newsics
Share This Article
Facebook Twitter Copy Link Print
Previous Article Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು
Next Article Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?