Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

Share
1 Min Read
SHARE

newsics.com | ನ್ಯೂಸಿಕ್ಸ್

ಕಾರವಾರ: ಭಾರತೀಯ ನೌಕಾಪಡೆಯ
ವ್ಯೂಹಾತ್ಮಕ ರಕ್ಷಣೆಯ ಪ್ರಮುಖ ಭಾಗವಾಗಿ ಏಷಿಯಾದ ಆಯಕಟ್ಟಿನ ನೌಕಾನೆಲೆಯಾದ
ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ
ಐಎನ್‌ಎಸ್ ಮಾಲ್ವಣ್’ ಯುದ್ಧನೌಕೆಯು ಬುಧವಾರ ಲೋಕಾರ್ಪಣೆಗೊಂಡಿತು.

ಈ ನೌಕೆಯನ್ನು ಮಾಹೆ ವರ್ಗದ ಎರಡನೇ ಆಂಟಿ-ಸಬ್‌ಮರಿನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ (ASW-SWC) ಆಗಿರುವ ಈ ನೌಕೆಯನ್ನು ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಬುಧವಾರ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡ ಈ ಯುದ್ಧನೌಕೆಯು ಕರಾವಳಿ ಕಣ್ಗಾವಲು, ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆ ಹಾಗೂ ಸಮುದ್ರ ಭದ್ರತೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲಿದೆ.

ಜತೆಗೆ, ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಯಲ್ಲಿ ಮೂರು ಸೇನಾ ಪಡೆಗಳ ಸಮನ್ವಯತೆ ಹೆಚ್ಚಲಿದ್ದು, ಸುರಕ್ಷಿತ ಕಡಲ ವ್ಯಾಪಾರಕ್ಕೆ ಇದು ಪೂರಕವಾಗಲಿದೆ ಎಂದರು.
ಪಶ್ಚಿಮ ನೌಕಾ ಕಮಾಂಡ್‌ನ ವೈಸ್ ಅಡ್ಮಿರಲ್ ಸಂಜಯ್ ವತ್ಸಾಯನ್ ಮಾತನಾಡಿ ಈ ನೌಕೆಯು ಆತ್ಮನಿರ್ಭರ ಭಾರತ ನಿರ್ಮಾಣ ಪರಿಕಲ್ಪನೆ ಅತ್ಯುತ್ತಮ ಉದಾಹರಣೆ ಎಂದರು.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ನೌಕೆಯ ಕಮಾಂಡರ್ ಪ್ರವೀಣಕುಮಾರ್ ತಿವಾರಿ, ಕೊಚ್ಚಿ ಶಿಪ್‌ಯಾರ್ಡ್‌ನ ವ್ಯವಸ್ಥಾಪಕ ಜೋಸ್ ವಿಜೆ ಸೇರಿದಂತೆ ನೌಕಾಪಡೆ ಹಾಗೂ ರಕ್ಷಣಾ ಸಚಿವಾಲಯದ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವದೇಶಿ ನಿರ್ಮಾಣ 

ಕಾರವಾರದ ಐ ಎನ್.ಎಸ್ ಕದಂಬ ನೌಕಾನೆಲೆಯಲ್ಲಿ ಯುದ್ಧನೌಕೆಯೊಂದರ ಲೋಕಾರ್ಪಣೆ ಆಗುತ್ತಿರುವುದು ಇದೇ ಪ್ರಥಮವಾಗಿದೆ.

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ನಿರ್ಮಿಸಿರುವ ಈ ನೌಕೆಯಲ್ಲಿ ಶೇ. 80ಕ್ಕೂ ಹೆಚ್ಚು ಸ್ವದೇಶಿ ಉಪಕರಣಗಳ ಬಳಕೆಯಾಗಿದೆ.

78.8 ಮೀಟರ್ ಉದ್ದ ಹಾಗೂ 1,150 ಟನ್ ತೂಕ ಹೊಂದಿರುವ ಈ ನೌಕೆಯು 30 ಎಂಎಂ ನೇವಲ್ ಗನ್, ಟಾರ್ಪಿಡೊ ಲಾಂಚರ್‌ಗಳು, ರಾಕೆಟ್ ಲಾಂಚರ್‌ಗಳು, ‘ಅಭಯ್’ ಸೋನಾರ್ ಹಾಗೂ ಬಿಇಎಲ್ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಯುದ್ಧ ನಿರ್ವಹಣಾ ವ್ಯವಸ್ಥೆಗಳನ್ನು ಹೊಂದಿದೆ.

ಮಹಾರಾಷ್ಟ್ರದ ಐತಿಹಾಸಿಕ ಕರಾವಳಿ ಪಟ್ಟಣ ‘ಮಾಲ್ವಣ್’ ಹೆಸರಿಡಲಾದ ಈ ನೌಕೆಯು ಛತ್ರಪತಿ ಶಿವಾಜಿ ಮಹಾರಾಜರ ಕಡಲ ಪರಂಪರೆಗೆ ಗೌರವ ಸಲ್ಲಿಸುತ್ತದೆ. ನೌಕೆಯ ಚಿಹ್ನೆಯಲ್ಲಿ ಧೈರ್ಯ ಮತ್ತು ಚುರುಕುತನದ ಸಂಕೇತವಾದ ‘ಬಾಘ್ ನಖ್’ (ಹುಲಿಯ ಉಗುರು) ಬಳಸಲಾಗಿದೆ.

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

TAGGED:#malwan #warship #karwar #launched #india #navey #news #kannadanews#newsics
Share This Article
Facebook Twitter Copy Link Print
Previous Article DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್
Next Article Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?