Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

Share
1 Min Read
SHARE

newsics.com | ನ್ಯೂಸಿಕ್ಸ್

ಆರ್‌ಸಿಬಿ (RCB) ಅಭಿಮಾನಿಗಳ ನೆಚ್ಚಿನ ‘ಕ್ವೀನ್’ ಸ್ಮೃತಿ ಮಂದಾನಾ ದಿಢೀರನೆ ‘ಲಕ್ನೋ ಸೂಪರ್ ಜೈಂಟ್ಸ್’ (LSG) ಜರ್ಸಿಯಂತಹ ಉಡುಪಿನಲ್ಲಿ ಕಾಣಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ. ನಮ್ಮ ನಾಯಕಿ ಆರ್‌ಸಿಬಿ ಬಿಟ್ಟು ಬೇರೆ ತಂಡ ಸೇರಿಬಿಟ್ರಾ ಎಂದು ಅಭಿಮಾನಿಗಳು ಒಂದು ಕ್ಷಣ ತಬ್ಬಿಬ್ಬಾಗಿದ್ದರೂ, ಈ ವೈರಲ್ ಫೋಟೋದ ಹಿಂದಿರುವ ಅಸಲಿ ಸತ್ಯವೇ ಬೇರೆಯಾಗಿದೆ.

 

ಇದು ಐಪಿಎಲ್ ಅಥವಾ ಡಬ್ಲ್ಯೂಪಿಎಲ್‌ಗೆ ಸಂಬಂಧಿಸಿದ ಬದಲಾವಣೆಯಲ್ಲ. ಬದಲಾಗಿ, ಇಂಗ್ಲೆಂಡ್‌ನಲ್ಲಿ ನಡೆಯಲಿರುವ ‘ದಿ ಹಂಡ್ರೆಡ್’ (The Hundred) ಲೀಗ್ ಟೂರ್ನಿಗಾಗಿ ಸ್ಮೃತಿ ಮಂದಾನಾ ಈ ಹೊಸ ಜರ್ಸಿಯನ್ನು ತೊಟ್ಟಿದ್ದಾರೆ.

ಇಂಗ್ಲೆಂಡ್‌ನ ಈ 100 ಎಸೆತಗಳ ಟೂರ್ನಿಯಲ್ಲಿ ಸ್ಮೃತಿ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಈ ಮುಂಚೆ ‘ಮ್ಯಾಂಚೆಸ್ಟರ್ ಒರಿಜಿನಲ್ಸ್’ ಹೆಸರಿನಲ್ಲಿದ್ದ ಈ ಫ್ರಾಂಚೈಸಿಯ ಪ್ರಮುಖ ಪಾಲುದಾರಿಕೆಯನ್ನು ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರಾದ ಸಂಜೀವ್ ಗೋಯೆಂಕಾ ಗ್ರೂಪ್ ಖರೀದಿಸಿದೆ. ಹೀಗಾಗಿ, ಈ ತಂಡವು ಎಲ್‌ಎಸ್‌ಜಿ ಹಾಗೂ ಡರ್ಬನ್ ಸೂಪರ್ ಜೈಂಟ್ಸ್ ಕುಟುಂಬದ ಭಾಗವಾಗಿದ್ದು, ಒಂದೇ ಮಾಲೀಕರಾಗಿರುವುದರಿಂದ ಜರ್ಸಿಯ ಶೈಲಿ ಮತ್ತು ಬಣ್ಣ ಒಂದೇ ರೀತಿಯಾಗಿದೆ.

Smriti Mandhana. Super Giant 👑 pic.twitter.com/UNWUNViHFJ

— Manchester Super Giants (@ManchesterSG100) July 20, 2026

ಈ ಬಾರಿಯ ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಸ್ಮೃತಿ ಮಂದಾನಾ ಆಟಗಾರ್ತಿಯಾಗಿ ಮಾತ್ರವಲ್ಲದೆ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ಉಪನಾಯಕಿಯಾಗಿಯೂ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಆಸ್ಟ್ರೇಲಿಯಾದ ದಿಗ್ಗಜ ಆಟಗಾರ್ತಿ ಮೆಗ್ ಲ್ಯಾನಿಂಗ್ ಅವರೊಂದಿಗೆ ಸ್ಮೃತಿ ಇನಿಂಗ್ಸ್ ಆರಂಭಿಸಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ, ಅದೇ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಆರ್‌ಸಿಬಿ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ, ಅವರು ಡಬ್ಲ್ಯೂಪಿಎಲ್‌ನಲ್ಲಿ ಆರ್‌ಸಿಬಿಯ ಕ್ಯಾಪ್ಟನ್ ಆಗಿಯೇ ಮುಂದುವರಿಯಲಿದ್ದಾರೆ.

 

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

TAGGED:#Smriti Mandhana #LSG #RCB #news #newsics
Share This Article
Facebook Twitter Copy Link Print
Previous Article Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ
Next Article Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?