Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಮನೆ ಖರ್ಚಿಗೆಂದು ಐದು ಸಾವಿರ ರೂಪಾಯಿ ಕೇಳಿದಕ್ಕೆ 65 ವರ್ಷದ ಪತ್ನಿಗೆ ಹೊಡೆದು, ಬೈದ 73 ವರ್ಷದ ಪತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತಗಾಗಿ ಪತ್ನಿಗೆ ಮಾಸಿಕ 10 ಸಾವಿರ ರೂ. ನೀಡಬೇಕು ಎಂದು ಪತಿಗೆ ಕಟ್ಟುನಿಟ್ಟಿನ‌ ನಿರ್ದೇಶನ ನೀಡಿದೆ.

ಪತ್ನಿ ಮೇಲೆ ಹಲ್ಲೆ, ಪತಿ ವಿರುದ್ಧ ಕ್ರಿಮಿನಲ್ ಕೇಸ್

ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತನ್ನ ವಿರುದ್ಧದ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸವೇಶ್ವರ ನಗರದ ನಿವಾಸಿ 73 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿದೆ.

ಪತಿಗೆ 73 ವರ್ಷ, ಪತ್ನಿಗೆ 65 ವರ್ಷ

ವೃದ್ಧ ಪತಿಯ ಪರ ವಕೀಲರು ಹಾಜರಾಗಿ, ಅರ್ಜಿದಾರು ಹಾಗೂ ದೂರುದಾರರು ವಯೋವೃದ್ಧ ದಂಪತಿ. ಅರ್ಜಿದಾರ ಪತಿಗೆ 73 ವರ್ಷ. ಪತ್ನಿಗೆ 65 ವರ್ಷ. ದಂಪತಿಗೆ ವಯಸ್ಕ ಒಂದು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿದ್ದಾರೆ. ಮನೆ ಖರ್ಚಿಗೆಂದು ಹಣ ಕೇಳಿದರು ಎಂಬ ಕಾರಣಕ್ಕೆ ಪತಿ – ಪತ್ನಿ ನಡುವೆ ಬಾಯಿ ಮಾತಿನಲ್ಲಿ ಗಲಾಟೆ ಆಗಿದೆ ಎಂದರು.

ಅದಾಗಲೇ ಅರ್ಜಿ ಹಾಗೂ ಪತ್ನಿ ದಾಖಲಿಸಿದ್ದ ದೂರಿನ ಅಂಶಗಳನ್ನು ಓದಿದ್ದ ನ್ಯಾಯಮೂರ್ತಿಗಳು, ಮನೆ ಖರ್ಚಿಗೆ ಹಣ ಕೇಳಿದರೆ, 73 ವರ್ಷದಲ್ಲೂ ಅರ್ಜಿದಾರರು ಪತ್ನಿಗೆ ಬೈಯ್ದು ಹೊಡೆಯುತ್ತಾರೆಯೇ? ಹೊಡೆಯೋದು ಹಾಗೂ ಬೈಯ್ಯುವುದಕ್ಕೆ ವಯಸ್ಸಿನ ಮಿತಿ ಇಲ್ಲವಲ್ಲ ಎಂದು ಹೇಳುತ್ತಿರಾ 65 ವರ್ಷದ ಪತ್ನಿಯು ಪತಿಯ ವಿರುದ್ಧ ಹಲ್ಲೆ ಮಾಡಿ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ. ಪತಿ ಈ ವಯಸ್ಸಿನಲ್ಲೇ ಈ ರೀತಿಯಲ್ಲಿ ವರ್ತಿಸುವುದಾದರೆ ಹಿಂದೆಲ್ಲಾ ಇನ್ನು ಯಾವ ಮಾದರಿಯಲ್ಲಿ ನಡೆದುಕೊಂಡಿರಬೇಕು ಎಂದು ತೀಕ್ಷ್ಣವಾಗಿ ಕೇಳಿದರು.

ಪತಿಯ ಪರ ವಕೀಲರು, ಪ್ರಕರಣ ಸಂಧಾನ ಮೂಲಕ ಇತ್ಯರ್ಥವಾಗುತ್ತದೆ. ಪತಿ-ಪತ್ನಿ ಒಟ್ಟಿಗೆ ವಾಸವಿದ್ದಾರೆ. ಚೆನ್ನಾಗಿಯೇ ಬದುಕುತ್ತಿದ್ದಾರೆ ಎಂದರು. ಆಗ ನ್ಯಾಯಪೀಠ ನ್ಯಾಯಮೂರ್ತಿಗಳು, ಮನೆ ಖರ್ಚಿಗೆಂದು ಪತ್ನಿ ಎಷ್ಟು ಅರ್ಜಿದಾರರ ಬಳಿ ಎಷ್ಟು ಕೇಳಿದ್ದರು ಎಂದು ಪ್ರಶ್ನಿಸಿದರು.

ನಂತರ ಐದು ಸಾವಿರ ರುಪಾಯಿ ಎಂದು ಅರ್ಜಿದಾರ ಪರ ವಕೀಲರು ಉತ್ತರಿಸಿದ್ದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಪತಿಯ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬೇಕಾದರೆ, ಪತ್ನಿ ಕೇಳಿದ ಮೊತ್ತಕ್ಕಿಂತ ಹೆಚ್ಚು ಹಣ ಕೊಡುತ್ತೀರಾ ಎಂದು ಕೇಳಿದರು.

ಅದಕ್ಕೆ ಪತಿಯ ಪರ ವಕೀಲರು ಒಪ್ಪಿದ ಹಿನ್ನೆಲೆಯಲ್ಲಿ ಅರ್ಜಿಯ‌ ಮುಂದಿನ ವಿಚಾರಣೆವರೆಗೆ ಅರ್ಜಿದಾರರು ತಮ್ಮ ‌ಪತ್ನಿಗೆ ಮಾಸಿಕ‌ 10 ಸಾವಿರ ರುಪಾಯಿ ಪಾವತಿಸಬೇಕು ಎಂದು ಸೂಚಿಸಿದ ನ್ಯಾಯಮೂರ್ತಿಗಳು, ಅರ್ಜಿದಾರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿ ವಿಚಾರಣೆ ಮುಂದೂಡಿದರು.

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

 

TAGGED:#courtorder #highcourt #justicenagaprasanna #karnataka #news #newsics #kannadanews
Share This Article
Facebook Twitter Copy Link Print
Previous Article Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?
Next Article Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?