newsics.com | ನ್ಯೂಸಿಕ್ಸ್
ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಗೊಲ್ಲಪಲ್ಲಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟಿರುವುದು ತೀವ್ರ ಸಂಚಲನ ಮೂಡಿಸಿದೆ.
ಮೃತರನ್ನು ವೃತ್ತಿಯಲ್ಲಿ ಪೇಂಟರ್ ಆಗಿದ್ದ ಪಿ. ವಂಶಿ (25) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮದ್ಯಪಾನದ ವಿಚಾರವಾಗಿ ತಾಯಿಯೊಂದಿಗೆ ಜಗಳವಾಡಿದ್ದ ವಂಶಿ, ರಾತ್ರಿ ಮನೆಗೆ ಮರಳಿ ಮಲಗಿದ್ದ. ಗುರುವಾರ ಬೆಳಿಗ್ಗೆ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತದೇಹದ ಬಳಿ ಸಿಕ್ಕ SIR ಫಾರಂನಲ್ಲಿ ತೆಲುಗು ಭಾಷೆಯಲ್ಲಿ ‘ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ, ನನ್ನ ಕುಟುಂಬಕ್ಕೆ ತೊಂದರೆ ಕೊಡಬೇಡಿ’ ಎಂದು ಬರೆದಿದ್ದು, ಇದರ ಫೋಟೋವನ್ನು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲೂ ಹಾಕಿಕೊಂಡಿದ್ದ.
ಆದರೆ, ಮೃತನಿಗೆ ಯಾವುದೇ ರಾಜಕೀಯ ಸಂಬಂಧವಿಲ್ಲ ಹಾಗೂ ಕೌಟುಂಬಿಕ ಸಮಸ್ಯೆಯಿಂದಾಗಿಯೇ ಈ ಹಂತಕ್ಕೆ ತಲುಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿಯವರ ಹೆಸರು ಏಕೆ ಉಲ್ಲೇಖಿಸಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ