Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಮಳೆ ಕೊರತೆ ತೀವ್ರ ಆತಂಕ ಸೃಷ್ಟಿಸಿದೆಯಾದರೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ‌ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು,‌ ಹಾಸನ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾದ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಮುಂಚೂಣಿಯಲ್ಲಿದೆ. ಕಳೆದ ಕೆಲ ದಿನಗಳಿಂದ ದಕ್ಷಿಣ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಜು.25ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಆದೇಶ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರಬಿದ್ದು 6 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿತ್ತು. ಶಾಲಾ ತರಗತಿ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್ ಮೇಲೆ ಮರ ಬಿದ್ದಿತ್ತು. ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ಘಟನೆ ನಡೆದಿತ್ತು. ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂತಹ ದುರ್ಘಟನೆಗಳು ನಡೆಯದಂತೆ ತಡೆಯಲು ಹಲವು ಸೂಚನೆಗಳನ್ನು ನೀಡಲಾಗಿದೆ. ಕೆಲವೆಡೆ ಭೂಕುಸಿತ ಆತಂಕಗಳು ನಿರ್ಮಾಣವಾಗಿದೆ. ಮಳೆಯಿಂದ ಮರಗಳು ಧರೆಗುರುಳುತ್ತಿದೆ.

ಉಡುಪಿ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ

ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆಯೂ ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

TAGGED:#rain #coastaldistricts #holidayannounce #schoolcolleges #southcanara #udupi #news #nrlewsics #kannadanews
Share This Article
Facebook Twitter Copy Link Print
Previous Article Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ
Next Article NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?