Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

Share
2 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ದೇಶದ ಸ್ಪರ್ಧಾತ್ಮಕ ಹಾಗೂ ಶೈಕ್ಷಣಿಕ ಪರೀಕ್ಷಾ ಪದ್ಧತಿಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ಖ್ಯಾತ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ಸಾರಥ್ಯದಲ್ಲಿ ಉನ್ನತ ಮಟ್ಟದ ‘ಹೈ-ಪವರ್ ಟಾಸ್ಕ್ ಫೋರ್ಸ್’ ಒಂದನ್ನು ರಚಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

 

ಸಾಮಾಜಿಕ ಜಾಲತಾಣದ ಮೂಲಕ ದೇಶದ ಜನತೆಗೆ ವಿಡಿಯೋ ಸಂದೇಶ ಕಳುಹಿಸಿರುವ ಪ್ರಧಾನಿಯವರು, ಯುವ ಜನತೆ ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ಕಾಪಾಡಲು ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅಕ್ರಮಗಳ ಮೂಲಕ ವಿದ್ಯಾರ್ಥಿಗಳ ಜೀವನದ ಜತೆ ಆಟವಾಡಿದ ದುಷ್ಕರ್ಮಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಅಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸಹ ಅಸ್ತಿತ್ವಕ್ಕೆ ತರಲಾಗಿದೆ ಎಂದು ಅವರು ನುಡಿದಿದ್ದಾರೆ.

ಕೇವಲ ಶಿಕ್ಷೆ ವಿಧಿಸುವುದಷ್ಟೇ ಅಲ್ಲದೆ, ಮುಂಬರುವ ದಿನಗಳಲ್ಲಿ ಸಂಪೂರ್ಣ ದೋಷರಹಿತ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಇದಕ್ಕಾಗಿ ಪರೀಕ್ಷೆಗಳ ಸಂಪೂರ್ಣ ಪ್ರಕ್ರಿಯೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಎಲ್ಲಾ ಸುಧಾರಣೆಗಳ ನೀಲಿನಕ್ಷೆ ತಯಾರಿಸುವ ಜವಾಬ್ದಾರಿಯನ್ನು ನಂದನ್ ನಿಲೇಕಣಿ ನೇತೃತ್ವದ ಸಮಿತಿಗೆ ವಹಿಸಲಾಗಿದೆ.

ಕಾರ್ಯಪಡೆ ಸದಸ್ಯರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ದ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಗುಪ್ತಚರ ಬ್ಯೂರೋ(ಐಬಿ)ದ ಮಾಜಿ ನಿರ್ದೇಶಕ ತಪನ್ ದೇಕಾ, ಐಐಟಿ ಚೆನ್ನೈನ ನಿರ್ದೇಶಕ ವಿ. ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕವಲ್ ಮತ್ತು ಲಾಜಿಸ್ಟಿಕ್ಸ್ ತಜ್ಞ ಅಮೃತ್ ಲಾಲ್ ಮೀನಾ ಅವರು ಈ ಪರೀಕ್ಷಾ ಕಾರ್ಯಪಡೆಯ ಪ್ರಮುಖ ಸದಸ್ಯರಾಗಿದ್ದಾರೆ.

‘ಇ-ಗೌವ್ ಫೌಂಡೇಶನ್’ನ ಸಹ-ಸ್ಥಾಪಕರಾಗಿ, ತಂತ್ರಜ್ಞಾನದ ಮೂಲಕ ನಗರ ಆಡಳಿತವನ್ನು ಸುಧಾರಿಸುವ ಸಂಸ್ಥೆಯ ಧ್ಯೇಯೋದ್ದೇಶವನ್ನು ರೂಪಿಸುವಲ್ಲಿ, ನಂದನ್‌ ನಿಲೇಕಣಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ತಂತ್ರಜ್ಞಾನ ಬಳಕೆಯ ಮೂಲಕ ಭಾರತದ ಪ್ರಮುಖ ವ್ಯವಸ್ಥೆಗಳನ್ನು ಗಟ್ಟಿಗೊಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

HIGH POWERED TASK FORCE on examination reforms under the leadership of Shri Nandan Nilekani constituted.@NandanNilekani pic.twitter.com/mMpmPdIEL5

— Narendra Modi (@narendramodi) July 26, 2026

 

 

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

TAGGED:#NEET Exam #PM Narendra Modi #Nandan Nilekani #news #newsics
Share This Article
Facebook Twitter Copy Link Print
Previous Article Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ
Next Article Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

Popular Posts

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read

You Might Also Like

ಪ್ರಮುಖವಿದೇಶ

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read
ಪ್ರಮುಖಕರ್ನಾಟಕ

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read
ಪ್ರಮುಖಕರ್ನಾಟಕ

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read
ಪ್ರಮುಖವೈರಲ್

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?