Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

Share
2 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ (Ram Temple Donation Theft Case) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ‘ವಿಶೇಷ ತನಿಖಾ ತಂಡ’ದ (SIT) ನೇತೃತ್ವವನ್ನು ಹಿರಿಯ ಐಪಿಎಸ್ ಅಧಿಕಾರಿ ಎಸ್. ಕಿರಣ್ ವಹಿಸಲಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಸ್‌ಐಟಿ ತಂಡವನ್ನು ಪುನರ್ ರಚಿಸಲಾಗಿದ್ದು, ತಂಡದಲ್ಲಿ ಮೂವರು ಐಪಿಎಸ್ ಅಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಹೊಸ ತಂಡದಲ್ಲಿ ಎಸ್. ಕಿರಣ್ ಅವರೊಂದಿಗೆ ಅಯೋಧ್ಯೆ ಡಿಐಜಿ ಸೋಮನ್ ವರ್ಮಾ ಹಾಗೂ ಎಸ್‌ಎಸ್ಪಿ ಗೌರವ್ ಗ್ರೋವರ್ ಕೂಡ ಇರಲಿದ್ದಾರೆ.

ಎಸ್‌ಐಟಿಗೆ ಹೊಸ ಅಧಿಕಾರಿಗಳ ಸೇರ್ಪಡೆ ಕುರಿತು ಮಾಹಿತಿ ಪಡೆದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ತನಿಖಾ ತಂಡದಲ್ಲಿ ಕಡ್ಡಾಯವಾಗಿ ಒಬ್ಬ ಚಾರ್ಟರ್ಡ್ ಅಕೌಂಟೆಂಟ್ (CA) ಅವರನ್ನು ನೇಮಿಸುವಂತೆ ಸೂಚಿಸಿದರು. ಅಲ್ಲದೆ, ದೇವಾಲಯಕ್ಕೆ ಬಂದಿರುವ ದೇಣಿಗೆಗೆ ಸಂಬಂಧಿಸಿದ ಸಂಪೂರ್ಣ ಲೆಕ್ಕಪತ್ರ ಹಾಗೂ ವಿವರಗಳನ್ನು ಎಸ್‌ಐಟಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ ನ್ಯಾಯಾಲಯ, ಮುಂದಿನ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಜುಲೈ 20ರಂದು ನಡೆದ ಹಿಂದಿನ ವಿಚಾರಣೆಯ ವೇಳೆ, ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ತನಿಖೆಯು ಸಂಪೂರ್ಣ ನ್ಯಾಯಯುತವಾಗಿ ನಡೆದು ತಾರ್ಕಿಕ ಅಂತ್ಯ ತಲುಪಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು.

ರಾಮಮಂದಿರದ ದೇಣಿಗೆ ಹಣ ಎಣಿಕೆ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ಹಾಗೂ ಕಳ್ಳತನ ಎಸಗಿದ ಆರೋಪದ ಮೇರೆಗೆ ಈಗಾಗಲೇ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಗರಣದ ನೈತಿಕ ಹೊಣೆ ಹೊತ್ತು ದೇವಾಲಯದ ನಿರ್ವಹಣೆ ನೋಡಿಕೊಳ್ಳುತ್ತಿದ್ದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಕಳೆದ ತಿಂಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಗಮನಾರ್ಹ ಸಂಗತಿಯಾಗಿದೆ.

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

TAGGED:#Ayodhya #Ram Mandir #Money scam #news #newsics
Share This Article
Facebook Twitter Copy Link Print
Previous Article Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ, ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ
Next Article Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

Popular Posts

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ, ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

1 Min Read

You Might Also Like

ಪ್ರಮುಖಆರೋಗ್ಯ

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖದೇಶ

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?