Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಯುವ ಸಮುದಾಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೆಚ್ ಐವಿ ಸೋಂಕಿಗೆ ಆರಂಭಿಕ ಹಂತದಲ್ಲೇ ಬ್ರೇಕ್ ಹಾಕಲು ಕರ್ನಾಟಕ ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಯುವಜನರಲ್ಲಿ ಸೋಂಕನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಒದಗಿಸುವ ಬೃಹತ್ ಯೋಜನೆಯ ಭಾಗವಾಗಿ, ರಾಜ್ಯಾದ್ಯಂತ ಇರುವ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಇಲಾಖೆ ತೀರ್ಮಾನಿಸಿದೆ.

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (NACO) ಇತ್ತೀಚಿನ ವರದಿಗಳ ಪ್ರಕಾರ, ದೇಶದಲ್ಲೇ ಅತಿ ಹೆಚ್ಚು ಹೆಚ್ ಐವಿ ಪೀಡಿತರಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 2.60 ಲಕ್ಷ ಜನರು ಈ ಸೋಂಕಿನೊಂದಿಗೆ ಜೀವಿಸುತ್ತಿದ್ದು, ಅವರಲ್ಲಿ 2.05 ಲಕ್ಷಕ್ಕೂ ಹೆಚ್ಚು ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ (ART) ಪಡೆಯುತ್ತಿದ್ದಾರೆ. ಇವೆಲ್ಲದರ ನಡುವೆ 18 ರಿಂದ 35 ವರ್ಷದ ಯುವಜನತೆಯಲ್ಲಿ ಸೋಂಕು ಅತ್ಯಂತ ವೇಗವಾಗಿ ಹರಡುತ್ತಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಕೇವಲ 18 ರಿಂದ 25 ವರ್ಷ ವಯೋಮಾನದ ಸುಮಾರು 7 ಸಾವಿರ ಯುವಕ-ಯುವತಿಯರಲ್ಲಿ ಸೋಂಕು ದೃಢಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ. ಇದಕ್ಕಿಂತಲೂ ಆತಂಕಕಾರಿ ವಿಷಯವೆಂದರೆ, ರಾಜ್ಯದಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗಲಿದೆ ಎಂಬ ಸುಳಿವೇ ಇಲ್ಲದೆ ಜೀವನ ನಡೆಸುತ್ತಿದ್ದಾರೆ.

ಪರೀಕ್ಷೆಗೆ ಒಳಗಾಗಲು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಮುಜುಗರ ಅಥವಾ ಭಯವಾಗಬಾರದು ಎಂಬ ಉದ್ದೇಶದಿಂದ ಇಲಾಖೆ ಸಂಪೂರ್ಣ ಗೌಪ್ಯತೆಗೆ ಆದ್ಯತೆ ನೀಡಿದೆ. ಇದಕ್ಕಾಗಿ ‘ನಿಮ್ಮ ಹೆಚ್ ಐವಿ ಸ್ಥಿತಿ ತಿಳಿದುಕೊಳ್ಳಿ’ ಎಂಬ ವಿಶೇಷ ಕ್ಯೂಆರ್ ಕೋಡ್ (QR Code) ಆಧಾರಿತ ‘ಸ್ವಯಂ ಅಪಾಯ ಮೌಲ್ಯಮಾಪನ’ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ತಮ್ಮ ಗೌಪ್ಯತೆಯನ್ನು ಕಾಯ್ದುಕೊಳ್ಳುವ ಮೂಲಕವೇ ಸ್ವತಃ ತಮ್ಮ ಆರೋಗ್ಯದ ಅಪಾಯದ ಮಟ್ಟವನ್ನು ಸುಲಭವಾಗಿ ಪರಿಶೀಲಿಸಿಕೊಳ್ಳಬಹುದು.

ಯುವ ಪೀಳಿಗೆಯ ಆರೋಗ್ಯ ಸುರಕ್ಷತೆಗಾಗಿ ಆರಂಭಿಸಲಾಗುತ್ತಿರುವ ಈ ಮಹತ್ವದ ಅಭಿಯಾನಕ್ಕೆ ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಪೂರ್ಣ ಸಹಕಾರ ನೀಡಬೇಕೆಂದು ಆರೋಗ್ಯ ಇಲಾಖೆಯ ಮುಖ್ಯಸ್ಥರು ಕರೆ ನೀಡಿದ್ದಾರೆ.

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

TAGGED:#HIVtest #college#students #karnataka #government #decide#health #news #newsics #kannadanews
Share This Article
Facebook Twitter Copy Link Print
Previous Article Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ
Next Article Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

Popular Posts

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

You Might Also Like

ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?